ಧರ್ಮಸ್ಥಳ ನಿವಾಸಿ ರಮೇಶ್ ಎಂಬವರು ತಮ್ಮ ವೈಯಕ್ತಿಕ ಫೇಸ್‌ಬುಕ್ ಖಾತೆಯನ್ನು ಪರಿಶೀಲಿಸುತ್ತಿದ್ದ ಸಂದರ್ಭದಲ್ಲಿ, Vijaya Viji ಎಂಬ ಖಾತೆಯಿಂದ ಮಾಡಲಾದ ಅಶ್ಲೀಲ ಹಾಗೂ ಮಾನಭಂಗ ಮಾಡುವ ರೀತಿಯ ಪೋಸ್ಟ್‌ಗಳು ಕಂಡುಬಂದಿರುವುದಾಗಿ ಆರೋಪಿಸಿದ್ದಾರೆ.
ಈ ಬಗ್ಗೆ ಪಿರ್ಯಾದಿನೊಂದಿಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ತೆರಳಿದ ಅವರು, ಸಲ್ಲಿಸಿದ ದೂರಿನ ಮೇರೆಗೆ ಠಾಣೆಯಲ್ಲಿ ಅ.ಕ್ರ: 37/2025 ರಂತೆ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ನೈತಿಕ ಸಂಹಿತೆಯ ಕಲಂ 296 ಬಿ.ಎನ್.ಎಸ್. ಅಡಿಯಲ್ಲಿ ಈ ಪ್ರಕರಣವನ್ನು ದಾಖಲಿಸಿಕೊಂಡು, ಪೊಲೀಸರು ಮುಂದಿನ ತನಿಖೆಗೆ ಕಸರತ್ತು ನಡೆಸುತ್ತಿದ್ದಾರೆ.
ಪೊಲೀಸರು ಶೀಘ್ರದಲ್ಲೇ ಆರೋಪಿತನನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲಿರುವುದಾಗಿ ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮದ ಮೂಲಕ ನಡೆಯುತ್ತಿರುವ ಅಪಪ್ರಚಾರ ಮತ್ತು ಮಾನಹಾನಿಕರ ಪೋಸ್ಟ್‌ಗಳನ್ನು ತಡೆಯಲು ಸಮಾಜಿಕ ಜಾಗೃತಿ ಅಗತ್ಯವಿದೆ ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.
إرسال تعليق