ಕಡಬ, ಜುಲೈ 3, 2025: ಕಡಬ ತಾಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ಮುಂಗಾರು ಮಳೆ ಗಟ್ಟಿಯಾಗಿ ಮುಂದುವರಿದಿದ್ದು, ನೈಸರ್ಗಿಕ ವಿಪತ್ತುಗಳ ಸಂಭವ ಸಾಧ್ಯತೆಯ ಹಿನ್ನೆಲೆಯಲ್ಲಿ ತಹಶೀಲ್ದಾರ ಹಾಗೂ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಹಲವು ತುರ್ತು ಕ್ರಮಗಳನ್ನು ಘೋಷಿಸಿದೆ.
ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯ ಆಧಾರದ ಮೇಲೆ, ಕಡಬ ತಾಲೂಕಿನಲ್ಲಿ ಈ ಕೆಳಗಿನ ಕ್ರಮಗಳನ್ನು ಜಾರಿಗೆ ತರಲಾಗಿದೆ:
🔹 ಜುಲೈ 3ರಂದು (ಇಂದು) ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
🔹 ಪ್ರವಾಹ ಅಥವಾ ಭೂಕುಸಿತ ಸಂಭವಿಸುವ ಪ್ರದೇಶಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
🔹 ನದಿ, ತಗ್ಗು ಪ್ರದೇಶ, ಕೆರೆ, ತೋಡು ಹಾಗೂ ಇತರ ನೀರು ತೊಟ್ಟುವ ಪ್ರದೇಶಗಳಿಗೆ ಸಾರ್ವಜನಿಕರು ಮತ್ತು ಪ್ರವಾಸಿಗರು ಹೋಗದಂತೆ ಎಚ್ಚರಿಕೆ ನೀಡಲಾಗಿದೆ.
🔹 ವಿದ್ಯುತ್ ಕಂಬ ಹಾಗೂ ತಂತಿಗಳ ಸಮೀಪಕ್ಕೆ ಹೋಗದಂತೆ ಸಾರ್ವಜನಿಕರಿಗೆ ಎಚ್ಚರಿಕೆ.
🔹 ಅಪಾಯದ ಸನ್ನಿವೇಶಗಳಿಂದ ದೂರವಿದ್ದು, ತಾಲೂಕು ಆಡಳಿತ ನೀಡುವ ಸೂಚನೆಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.
🔹 ಯಾವುದೇ ರೀತಿಯ ವಿಕೋಪ ಅಥವಾ ಅಪಾಯ ಸಂಭವಿಸಿದರೆ ಸಾರ್ವಜನಿಕರು ತಕ್ಷಣ ಪಂಚಾಯತ್ ಅಥವಾ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಬೇಕಾಗಿದೆ.
ತುರ್ತು ಸೇವೆಗಳಿಗಾಗಿ ಕಡಬ ತಾಲೂಕು ಕಂಟ್ರೋಲ್ ರೂಂ (24x7): 08251-260435
ಪ್ರಕಟನೆ ನೀಡಿರುವವರು:
ತಹಶೀಲ್ದಾರರು ಹಾಗೂ ಕಾರ್ಯನಿರ್ವಾಹಕ ದಂಡಾಧಿಕಾರಿ,
ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರ, ಕಡಬ
إرسال تعليق