ಕಡಬ, ಜುಲೈ 24:ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ಪೂರ್ವ ತಯಾರಿಯ ಭಾಗವಾಗಿ, ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಯಕರ್ತರ ಸಮಾವೇಶವನ್ನು ಜುಲೈ 25, ಶುಕ್ರವಾರ ಮಧ್ಯಾಹ್ನ 3:00 ಗಂಟೆಗೆ ಕಡಬ ಅನುಗ್ರಹ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಈ ಸಮಾವೇಶದಲ್ಲಿ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಸನ್ಮಾನ್ಯ ಶ್ರೀ ದಿನೇಶ್ ಗುಂಡೂರಾವ್ ಭಾಗವಹಿಸಲಿದ್ದಾರೆ. ಜೊತೆಗೆ ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಮಂಜುನಾಥ್ ಭಂಡಾರಿ, ಕೆಪಿಸಿಸಿ ಉಪಾಧ್ಯಕ್ಷರಾದ ಎಂ.ಸಿ. ವೇಣುಗೋಪಾಲ್, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕೆ. ಹರೀಶ್ ಕುಮಾರ್, ಮಾಜಿ ಸಚಿವರುಗಳಾದ ಶ್ರೀ ಬಿ. ರಮಾನಾಥ ರೈ, ಶ್ರೀ ಅಭಯಚಂದ್ರ ಜೈನ್, ಶ್ರೀ ವಿನಯಕುಮಾರ್ ಸೊರಕೆ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಕೆಪಿಸಿಸಿ ಸಂಯೋಜಕ ಜಿ. ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯ ಐವನ್ ಡಿ. ಸೋಜ, ಸುಳ್ಯ ಕ್ಷೇತ್ರ ಉಸ್ತುವಾರಿಯಾದ ಜಿ.ಎ. ಬಾವಾ, ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಿಥುನ್ ರೈ, ಇನಾಯತ್ ಅಲಿ, ರಕ್ಷಿತ್ ಶಿವರಾಮ್, ಪದ್ಮರಾಜ್ ಪೂಜಾರಿ, ಗೇರು ನಿಗಮದ ಅಧ್ಯಕ್ಷರಾದ ಮಮತ ಗಟ್ಟಿ ಸೇರಿದಂತೆ ಹಲವಾರು ಹಿರಿಯ ನಾಯಕರು ಉಪಸ್ಥಿತರಿರಲಿದ್ದಾರೆ.
ಸಭೆಯಲ್ಲಿ ಕೆಪಿಸಿಸಿ ಸದಸ್ಯರು, ಡಿಸಿಸಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರು, ಮಾಜಿ ಮತ್ತು ಹಾಲಿ ಪಂಚಾಯತ್ ಸದಸ್ಯರು, ನಿಗಮ ಮಂಡಳಿ ನಾಮನಿರ್ದೇಶಿತರು, ಗ್ಯಾರಂಟಿ ಸಮಿತಿ ಸದಸ್ಯರು, ಮುಂಚೂಣಿ ಘಟಕಗಳ ಪ್ರಮುಖರು, ಯುವ ಮತ್ತು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಭಾಗಿ ಆಗಲಿದ್ದು, ಈ ಸಮಾವೇಶವನ್ನು ಯಶಸ್ವಿಯಾಗಿಸಲು ಎಲ್ಲಾ ಮಟ್ಟದ ಕಾರ್ಯಕರ್ತರಿಗೆ ಕರೆ ನೀಡಲಾಗಿದೆ.
ಈ ಸಮಾವೇಶವು ಮುಂದಿನ ಚುನಾವಣೆಗೆ ಕಾಂಗ್ರೆಸ್ ಪಾಳಯದ ತಂತ್ರ ರೂಪರೇಖೆ ಹಾಗೂ ಸಂಘಟನೆಯ ಬಲವರ್ಧನೆಯತ್ತ ಒಂದು ಮಹತ್ವದ ಹೆಜ್ಜೆಯಾಗಲಿದೆ.
ಅಭಿಲಾಷ್ ಪಿ.ಕೆ
ಅಧ್ಯಕ್ಷರು, ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿ
Post a Comment