ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಉಷಾ ಅಂಚನ್ ನೆಲ್ಯಾಡಿ ಆಯ್ಕೆ – ಅಭಿನಂದನೆಗಳ ಸುರಿಮಳೆ.

ಸುಬ್ರಹ್ಮಣ್ಯ, ಜುಲೈ 24:ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಉಷಾ ಅಂಚನ್ ನೆಲ್ಯಾಡಿ ಅವರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಮಹಿಳಾ ವಿಭಾಗದ ಸಂಘಟನೆಗೆ ಬಲ ನೀಡುವ ಉದ್ದೇಶದಿಂದ ಈ ಆಯ್ಕೆ ನಡೆದಿದೆ.

ಉಷಾ ಅಂಚನ್ ಅವರು ಈಗಾಗಲೇ ಕ್ಷೇತ್ರದಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿರುವ ಹೆಸರಾಂತ ಮುಖಂಡರಾಗಿದ್ದು, ಪಕ್ಷದ ನಿಷ್ಠಾವಂತರಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಅವರ ನೇತೃತ್ವದಲ್ಲಿ ಮಹಿಳಾ ಕಾಂಗ್ರೆಸ್ ಇನ್ನಷ್ಟು ಚುರುಕು ಪಡೆಯಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಈ ಹಿನ್ನಲೆಯಲ್ಲಿ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ,ಕಡಬ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಯೋಜನೆ ಅಧ್ಯಕ್ಷ ಸುದೀರ್ ಶೆಟ್ಟಿ ಅವರು ಉಷಾ ಅಂಚನ್ ಅವರಿಗೆ ಹಾರ್ದಿಕ ಅಭಿನಂದನೆಗಳನ್ನು ತಿಳಿಸಿ, ಹೊಸ ಹೊಣೆಗಾರಿಕೆಯಲ್ಲಿ ಯಶಸ್ಸು ಕೋರಿ ಶುಭಾಶಯಗಳು ತಿಳಿಸಿದರು.

ಪಕ್ಷದ ಸ್ಥಳೀಯ ಮತ್ತು ಜಿಲ್ಲಾ ಮಟ್ಟದ ಮುಖಂಡರು ಕೂಡ ಈ ಆಯ್ಕೆಗೆ ಸಂತೋಷ ವ್ಯಕ್ತಪಡಿಸಿದ್ದಾರೆ.

Post a Comment

أحدث أقدم