ಕಡಬ ತಾಲೂಕಿನಲ್ಲಿ ಕಟ್ಟಡ ಕಾಮಗಾರಿಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರು ಕೆಂಪು ಕಲ್ಲು ಮತ್ತು ಮರಳಿನ ಕೊರತೆಯಿಂದ ಕೆಲಸವಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ, ಭಾರತೀಯ ಮಜ್ದೂರ್ ಸಂಘ (ಬಿಎಂಎಸ್) ಕಡಬ ತಾಲೂಕು ಸಮಿತಿಯು ಸರಕಾರ ಮತ್ತು ಪೊಲೀಸರು ಮೂಲಕ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದೆ.
ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ ಅವರ ಮೂಲಕ ಸರ್ಕಾರಕ್ಕೆ ಹಾಗೂ ಕಡಬ ಪೋಲಿಸ್ ಠಾಣೆ ಮೂಲಕ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಈ ಮನವಿಯನ್ನು ನೀಡಲಾಗಿದೆ.
ಬಿಎಂಎಸ್ ಮನವಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿರುವಂತೆ, ಕೆಂಪು ಕಲ್ಲು ಮತ್ತು ಮರಳಿನ ಪೂರೈಕೆಯಲ್ಲಿ ವಿಳಂಬವಾಗುತ್ತಿರುವುದರಿಂದ ಕಟ್ಟಡ ಕಾಮಗಾರಿ ಸ್ಥಗಿತಗೊಂಡಿದ್ದು, ಹಲವಾರು ಕಾರ್ಮಿಕರು ಉದ್ಯೋಗವಿಲ್ಲದೆ ಪರದಾಡುವ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಕೆಲವರು ಸಾಲ ಮಾಡಿಕೊಂಡು ಮನೆ ಕಟ್ಟಿ ಮುಗಿಸಬೇಕೆಂಬ ಆಶೆಯಿಂದ ಕಾಯುತ್ತಿದ್ದರು, ಆದರೆ ಕೆಲಸ ಇಲ್ಲದ ಕಾರಣ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ.
ಒಂದು ವಾರದೊಳಗೆ ಸ್ಪಂದಿಸದರೆ ಹೋರಾಟ
ಬಿಎಂಎಸ್ ಪರವಾಗಿ ನೀಡಲಾದ ಮನವಿಯಲ್ಲಿ, ಈ ಸಮಸ್ಯೆಗೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು. ಒಂದು ವಾರದೊಳಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟವನ್ನು ಆರಂಭಿಸಲಾಗುವುದು ಎಂದು ಎಚ್ಚರಿಸಲಾಗಿದೆ.
ಮನವಿ ನೀಡುವ ಸಂದರ್ಭದಲ್ಲಿ ಹಾಜರಿದ್ದ ಪ್ರಮುಖರು:
ಬಿಎಂಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ವಕೀಲ ಅನಿಲ್ ಕುಮಾರ್
ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರನಾಥ ಶೆಟ್ಟಿ
ಕಡಬ ತಾಲೂಕು ಸಮಿತಿ ಅಧ್ಯಕ್ಷ ತು. ಚಂದ್ರಶೇಖರ ಮರ್ಧಾಳ
ಸುಬ್ರಹ್ಮಣ್ಯ ವಲಯ ಅಧ್ಯಕ್ಷ ಗಿರೀಶ್ ಆಚಾರ್
ವಿಹಿಪ್ ಪುತ್ತೂರು ಜಿಲ್ಲಾ ಸಹ ಕಾರ್ಯದರ್ಶಿ ಪ್ರಮೋದ್ ರೈ ಕಡಬ
ಬಜರಂಗದಳ ಕಡಬ ತಾಲೂಕು ಸಂಯೋಜಕ ಅಶ್ವಿತ್ ಕಂಡಿಗ
ಸುಬ್ರಹ್ಮಣ್ಯ ಸಿ.ಎ ಬ್ಯಾಂಕ್ ನಿರ್ದೇಶಕ ಯಶೋಧಕೃಷ್ಣ
ಬಿಎಂಎಸ್ ಸದಸ್ಯರಾದ ಬಾಲಕೃಷ್ಣ ಬಲ್ಯ ಕೆರೆನಡ್ಕ, ಶಿವರಾಮ ಗೌಡ ಅಚ್ಚಿಲ, ಮೋಹನ ಗೌಡ ಅಚ್ಚಿಲ, ವರದಾರಾಜ್ ಕೆರ್ಮಾಯಿ ಮೊದಲಾದವರು ಉಪಸ್ಥಿತರಿದ್ದರು.
Post a Comment