ಕೊಕ್ಕಡ ಆನೆ ದಾಳಿಗೆ ವ್ಯಕ್ತಿ ಬಲಿ: ಮೃತರ ಮನೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ.


ಕೊಕ್ಕಡ, ಜು.17:
ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿ ನಡೆದ ಆನೆ ದಾಳಿಯಿಂದ ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ (60) ದುರ್ಮರಣಕ್ಕೀಡಾಗಿರುವ ಘಟನೆಗೆ ಸಂಬಂಧಿಸಿದಂತೆ, ಸುಳ್ಯ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರು ಮೃತರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಶಾಸಕರಾದ ಹರೀಶ್ ಪೂಂಜರೊಂದಿಗೆ ಈ ಬಗ್ಗೆ ಸಮಾಲೋಚನೆ ನಡೆಸಿದ ಭಾಗೀರಥಿ ಮುರುಳ್ಯ, ಮೃತರ ಕುಟುಂಬಕ್ಕೆ ಗರಿಷ್ಠ ಮಟ್ಟದ ಪರಿಹಾರ ನೀಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಮೂಲಕ ಸರ್ಕಾರದ ಗಮನ ಸೆಳೆದಿದ್ದಾರೆ. ಅಲ್ಲದೆ ಕುಟುಂಬದ ಸದಸ್ಯರೊಬ್ಬರಿಗೆ ಸರಕಾರಿ ಉದ್ಯೋಗ ನೀಡುವಂತೆ ಕೂಡ ಮನವಿ ಮಾಡಿದರು.

ಆದಷ್ಟೂ ಬೇಗನೆ ಅರಣ್ಯ ಇಲಾಖೆ ವತಿಯಿಂದ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಅರಣ್ಯಾಧಿಕಾರಿಗಳಿಗೆ ಅವರು ಒತ್ತಾಯಿಸಿದರು.

ಈ ಆನೆ ದಾಳಿ ಘಟನೆ ಸುಳ್ಯ ಕ್ಷೇತ್ರದ ವ್ಯಾಪ್ತಿಯ ಕೌಕ್ರಾಡಿ ಗ್ರಾಮದ ಗುಂಡಿ ಎಂಬ ಪ್ರದೇಶದಲ್ಲಿ ಸಂಭವಿಸಿದ್ದು, ಶಾಸಕಿ ಭಾಗೀರಥಿ ಮುರುಳ್ಯ ಅವರು ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ನೆಲ್ಯಾಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿಪ್ರಸಾದ್ ಶೆಟ್ಟಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ವಿಶ್ವ ಹಿಂದು ಪರಿಷತ್ ಮುಖಂಡ ನವೀನ್ ನೆರಿಯ ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

Post a Comment

Previous Post Next Post