ಕುಕ್ಕೆ ಸುಬ್ರಹ್ಮಣ್ಯ, ಜುಲೈ 26:ನಿನ್ನೆ ದಿನಾಂಕ 25-07-2025 ರಂದು ಬಳ್ಪದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ರಸ್ತೆಯಲ್ಲಿ ಬೈಕ್‌ನ್ನು ಅಡ್ಡಾ ದಿಡ್ಡಿಯಾಗಿ ಚಲಾಯಿಸಿದ್ದ ಯುವಕರನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿ ಬೈಕ್ ಓಡಿಸಿದ್ದ ಕಾರಣ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಜರುಗಿಸಲಾಗಿದೆ.
ಭಾರತೀಯ ಮೋಟಾರ್ ವಾಹನ ಕಾಯ್ದೆ–1988ರ ಪ್ರಕಾರ ಸದ್ರಿ ಯುವಕರ ವಿರುದ್ಧ ಪ್ರಕರಣ ದಾಖಲಿಸಿ, ಅವರ ಮೇಲೆ ಸೂಕ್ತ ದಂಡ ವಿಧಿಸಲಾಗಿದೆ. ರಸ್ತೆಯ ನಿಯಮಗಳನ್ನು ಮೀರಿ ಬೈಕ್ ಓಡಿಸುವುದು ಕಾನೂನಿನ ಪ್ರಕಾರ ಅಪರಾಧವಾಗಿದ್ದು, ಈ ಕುರಿತು ಯುವಜನತೆ ಜಾಗರೂಕರಾಗಬೇಕೆಂದು ಪೊಲೀಸರು ತಿಳಿಸಿದ್ದಾರೆ.
ಸಾರಿಗೆ ಸುರಕ್ಷತೆಗಾಗಿ ಸಾರ್ವಜನಿಕರು ಸಹಕಾರ ನೀಡಬೇಕೆಂದು ಪೊಲೀಸ್ ಇಲಾಖೆ ವಿನಂತಿಸಿದೆ.
إرسال تعليق