ಕುಕ್ಕೆ ಸುಬ್ರಹ್ಮಣ್ಯ, ಜುಲೈ 29:
ಇಂದು ನಾಗರ ಪಂಚಮಿ ಹಬ್ಬದ ಪ್ರಯುಕ್ತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಅದ್ದೂರಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.
ಈ ಸಂದರ್ಭದಲ್ಲಿ ದೇವರಿಗೆ ಕ್ಷೀರಾಭಿಷೇಕ, ಎಳನೀರು ಅಭಿಷೇಕ, ಪಂಚಾಮೃತ ಅಭಿಷೇಕ ಹಾಗೂ ನಾಗ ತಂಬಿಲ ಸೇವೆ ನೆರವೇರಿಸಲಾಯಿತು. ವಿವಿಧ ವೈದಿಕ ಆಚರಣೆಗಳು ನಡೆಯಿತು.
ಪೂಜಾ ಕಾರ್ಯಕ್ರಮದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಶ್ರೀಮತಿ ಲೀಲಾ ಮನಮೋಹನ್, ಶ್ರೀಮತಿ ಸೌಮ್ಯ ಭರತ್, ಶ್ರೀಮತಿ ಪ್ರವೀಣ ರೈ, ಮಾಸ್ಟರ್ ಪ್ಲಾನ್ ಸಮಿತಿಯಿಂದ ಲೋಲಾಕ್ಷ, ಪವನ್ ಎಂ.ಡಿ ಹಾಗೂ ಅನೇಕ ಭಕ್ತರು ಭಾಗವಹಿಸಿದ್ದರು.
ನೂರಾರು ಭಕ್ತಾದಿಗಳು ದೇವರ ದರ್ಶನಕ್ಕಾಗಿ ಬಂದಿದ್ದರು. ನಾಗದೇವರ ಆರಾಧನೆಯ ಈ ಸಂದರ್ಭದಲ್ಲಿ ದೇವಾಲಯದಲ್ಲಿ ಭಕ್ತಿಯಿಂದ ತುಂಬಿತ್ತು.
Post a Comment