ಕರ್ನಾಟಕ ಸರ್ಕಾರದ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಇಂದು ಸಂಜೆ ಪವಿತ್ರ ಧಾರ್ಮಿಕ ತೀರ್ಥಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದರು. ಅವರ ಆಗಮನದ ಸಂದರ್ಭದಲ್ಲಿ ದೇವಸ್ಥಾನದ ಆದಿಶೇಷ ಗಸ್ಟ್ ಹೌಸ್‌ನಲ್ಲಿ ಭವ್ಯ ಸ್ವಾಗತ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಅವರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಅಶೋಕ್ ನೆಕ್ರಾಜೆ, ಡಾ. ರಘು, ಮಹೇಶ್ ಕುಮಾರ್ ಕರಿಕ್ಕಳ, ಸೌಮ್ಯ ಭರತ್, ಪ್ರವೀಣ್ ರೈ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಆತ್ಮೀಯವಾಗಿ ಬರಮಾಡಿಕೊಂಡರು.
ಮಾಸ್ಟರ್ ಪ್ಲಾನ್ ಸಮಿತಿಯ ಲೋಲಾಕ್ಷ ಕೈಕಂಬ, ಪವನ್ ಎಂ.ಡಿ, ಕಡಬ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಸುಧೀರ್ ಶೆಟ್ಟಿ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್, ಸುಳ್ಯ ಶಾಸಕ ಅಭ್ಯರ್ಥಿ ಕೃಷ್ಣಪ್ಪ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್, ಸುಳ್ಯ ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಹಾಗೂ ಸಾಮಾಜಿಕ ಗಣ್ಯರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಡಿವೈಎಸ್‌ಪಿ ಅರುಣ್ ನಾಗೇಗೌಡ, ಸರ್ಕಲ್ ಇನ್ಸ್‌ಪೆಕ್ಟರ್ ತಿಮ್ಮಪ್ಪ ನಾಯ್ಕ, ಎಸ್‌ಐ ಕಾರ್ತಿಕ್, ಮತ್ತು ಇನ್ನಿತರ ಪೊಲೀಸ್ ಅಧಿಕಾರಿಗಳು ಹಾಗೂ ದೇವಸ್ಥಾನದ ಶಿಷ್ಟಾಚಾರ ವಿಭಾಗದ ಜಯರಾಮ ರಾವ್, ಪ್ರಮೋದ್ ಮತ್ತು ಸ್ಥಳೀಯ ಪ್ರಮುಖರು ಉಪಸ್ಥಿತಿಯಲ್ಲಿ ಇದ್ದರು.
ಡಾ. ಪರಮೇಶ್ವರ ಅವರು ಜುಲೈ 9 ರಂದು ಬೆಳಿಗ್ಗೆ ನಡೆಯುವ ಆಶ್ಲೇಷ ಪೂಜೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
إرسال تعليق