ಸುಬ್ರಹ್ಮಣ್ಯ: ನೂಚಿಲದ ಅಪಾಯಕಾರಿ ರಸ್ತೆಯ ವೀಕ್ಷಣೆ ನಡೆಸಿದ ಶಾಸಕಿ ಭಾಗೀರಥಿ ಮುರುಳ್ಯ.

ಸುಬ್ರಹ್ಮಣ್ಯ ಗ್ರಾಮಪಂಚಾಯತ್ ವ್ಯಾಪ್ತಿಯ ನೂಚಿಲ ಎಂಬಲ್ಲಿ ರಸ್ತೆ ಬದಿಯಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಸ್ಥಳೀಯರಿಗೆ ಸಂಪರ್ಕ ರಸ್ತೆಯಾಗಿ ಬಳಕೆಯಾಗುವ ಮಾರ್ಗವೊಂದು ಅಪಾಯಕರ ಸ್ಥಿತಿಯಲ್ಲಿ ಬಂದಿದೆ. ಈ ಪರಿಸ್ಥಿತಿ ತೀವ್ರವಾಗುವ ಮುನ್ನ ತುರ್ತಾಗಿ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂಬ ಹಿನ್ನಲೆಯಲ್ಲಿ ಸುಳ್ಯ ಶಾಸಕಿಯಾಗಿರುವ ಕುಮಾರಿ ಭಾಗೀರಥಿ ಮುರುಳ್ಯ ಅವರು ಜುಲೈ 29ರಂದು ಸ್ಥಳಕ್ಕೆ ಭೇಟಿ ನೀಡಿದರು.


ಶಾಸಕಿ ಅವರು ರಸ್ತೆಯ ಪರಿಸ್ಥಿತಿಯನ್ನು ಸ್ಥಳದಲ್ಲೇ ಪರಿಶೀಲಿಸಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವುದಾಗಿ ತಿಳಿದು ಬಂದಿದೆ. ಅವರು ಸಮಸ್ಯೆಯ ಗಂಭೀರತೆಯನ್ನು ಮನಗಂಡು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ತ್ವರಿತವಾಗಿ ಕಾಮಗಾರಿ ಪ್ರಾರಂಭಿಸುವ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷ ರಾಜೇಶ್ ಎನ್.ಎಸ್., ಸದಸ್ಯ ಗಿರೀಶ್ ಆಚಾರ್ಯ, ಶ್ರೀಕುಮಾರ್ ಹಾಗೂ ಸ್ಥಳೀಯರಾದ ಬಾಲಸುಬ್ರಹ್ಮಣ್ಯ ಭಟ್ ಮತ್ತು ಮತ್ತಿತರರು ಉಪಸ್ಥಿತರಿದ್ದರು. ಸ್ಥಳೀಯರ ಪರವಾಗಿ ಈ ಸಮಸ್ಯೆಯನ್ನು ಶಾಸಕಿ ಮುಂದಿಟ್ಟಿದ್ದು, ಶೀಘ್ರದಲ್ಲೇ ಇತರ ಅನಾಹುತಗಳನ್ನು ತಡೆಯುವ ನಿರೀಕ್ಷೆ ವ್ಯಕ್ತವಾಗಿದೆ.

Post a Comment

Previous Post Next Post