🛕 ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕುಕ್ಕೆ ಸುಬ್ರಹ್ಮಣ್ಯ ಶ್ರೀ ಕ್ಷೇತ್ರಕ್ಕೆ - ಭೇಟಿಗೆ ವಿಶೇಷ ಸ್ವಾಗತ


ಸುಬ್ರಹ್ಮಣ್ಯ | ಜುಲೈ 28, 2025
ಮಾಜಿ ಸಚಿವರು ಹಾಗೂ ಉಡುಪಿಯ ಮಾಜಿ ಶಾಸಕರಾದ ಪ್ರಮೋದ್ ಮಧ್ವರಾಜ್ ಅವರು ಇಂದು ಪವಿತ್ರ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿನೀಡಿ ಶ್ರೀ ದೇವರ ದರ್ಶನ ಪಡೆದರು.

 ದೇವಳಕ್ಕೆ ಆಗಮಿಸಿದ ಶ್ರೀಯುತರಿಗೆ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ ಅವರು ಭಕ್ತಿಪೂರ್ವಕವಾಗಿ ಸ್ವಾಗತಿಸಿ ದೇವಳದಿಂದ ವಿಶೇಷ ಗೌರವ ಸಲ್ಲಿಸಿದರು.

ಶ್ರೀ ದೇವರ ದರ್ಶನದ ಬಳಿಕ ಶ್ರೀಮಠದ ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಅವರ ದರ್ಶನ ಪಡೆದು ಆಶೀರ್ವಾದ ಸ್ವೀಕರಿಸಿದರು.


ಈ ಸಂದರ್ಭ ದೇವಸ್ಥಾನ ಸಮಿತಿಯ ಸದಸ್ಯರಾದ ಅಶೋಕ್ ನೇಕ್ರಾಜೆ, ಶ್ರೀಮತಿ ಸೌಮ್ಯ ಭರತ್, ಮಾಸ್ಟರ್ ಪ್ಲಾನ್ ಅಭಿವೃದ್ಧಿ ಸಮಿತಿಯ ಸದಸ್ಯರಾದ ಸತೀಶ್ ಕೂಜುಗೋಡು, ಲೋಲಾಕ್ಷ ಕೈಕಂಬ, ಪವನ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Post a Comment

Previous Post Next Post