ಪಂಜ ಶಾಲೆಯಲ್ಲಿ ಹೊಸ ಶೌಚಾಲಯ ಉದ್ಘಾಟನೆ – “ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು” ಎಂದ ಶಾಸಕಿ ಭಾಗೀರಥಿ ಮುರುಳ್ಯ.


ಪಂಜ
, ಜುಲೈ 3 – “ನಮ್ಮ ದೇಶದಲ್ಲಿ ಸ್ವಚ್ಛತೆಗೆ ಹೆಚ್ಚಿನ ಮಹತ್ವ ಹಾಗೂ ಆದ್ಯತೆಯನ್ನು ನೀಡುತ್ತಾ ಬಂದಿದ್ದೇವೆ. ಎಲ್ಲಿ ಸ್ವಚ್ಛತೆ ಇದೆಯೋ ಅಲ್ಲಿ ಉತ್ತಮ ಆರೋಗ್ಯ ಇರುತ್ತದೆ. ಪ್ರತಿಯೊಬ್ಬರೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು,” ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಅವರು ಬುಧವಾರ ಪಂಜ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳೂರು ಎಂಆರ್‌ಪಿಎಲ್ ವತಿಯಿಂದ ಪಿಎಸ್‌ಆರ್ ಯೋಜನೆಯ ಅಡಿಯಲ್ಲಿ ರೂ.20 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಬಾಲಕ, ಬಾಲಕಿಯರ ಪ್ರತ್ಯೇಕ ಶೌಚಾಲಯಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಜಯಲಕ್ಷ್ಮಿ ವಹಿಸಿದ್ದರು. ಉಪಾಧ್ಯಕ್ಷ ನಾರಾಯಣ ಕೃಷ್ಣ ನಗರ, ಎಸ್‌ಡಿಎಂಸಿ ಅಧ್ಯಕ್ಷ ಲಿಗೋದರ ಆಚಾರ್ಯ, ಉಪಾಧ್ಯಕ್ಷೆ ಸೌಮ್ಯ ಶ್ರೀ, ಸದಸ್ಯರಾದ ಚಂದ್ರಶೇಖರ ದೇರಾಜೆ, ಲಿಖಿತ್ ಪಲ್ಲೋಡಿ, ಅಧಿಕಾರಿ ಪ್ರದೀಪ್ ಕುಮಾರ್, ಶಾಲಾ ಮುಖ್ಯ ಶಿಕ್ಷಕಿ ಲೀಲಾ ಕುಮಾರಿ ಟಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶೌಚಾಲಯ ನಿರ್ಮಾಣದ ಕಾರ್ಯವನ್ನು ನಿರ್ವಹಿಸಿದ ಸಬ್ಬೀರ್ ಬಾಳಿಲ ಹಾಗೂ ಎಂಆರ್‌ಪಿಎಲ್ ಅಧಿಕಾರಿ ಪ್ರದೀಪ್ ಕುಮಾರ್ ಅವರಿಗೆ ಸನ್ಮಾನವನ್ನೂ ನೀಡಲಾಯಿತು. ಶಾಲಾ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಸೋಮಶೇಖರ ನೇರಳ ಕಾರ್ಯಕ್ರಮದ ಪ್ರಾರಂಭದಲ್ಲಿ ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕಿ ಲೀಲಾ ಕುಮಾರಿ ಟಿ ಸ್ವಾಗತಿಸಿದರು. ಜೆಸಿಐ ಪಂಜ ಮಾಜಿ ಅಧ್ಯಕ್ಷ ತೀರ್ಥಾನಂದ ಕೊಡೆಂಕಿರಿ ನಿರೂಪಣೆ ನಡೆಸಿದರು. ಎಸ್‌ಡಿಎಂಸಿ ಅಧ್ಯಕ್ಷ ಲಿಗೋದರ ಆಚಾರ್ಯ ಧನ್ಯವಾದ ಅರ್ಪಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು, ಪೋಷಕರು, ಊರಿನವರು ಹಾಗೂ ಶಿಕ್ಷಕ ವೃಂದದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Post a Comment

Previous Post Next Post