ಭಾರೀ ಗಾಳಿ ಮಳೆಗೆ ಮರ ಬಿದ್ದು ವೃದ್ದೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ!



ನಾಲ್ಕೂರು
, ಜುಲೈ 27 –ನಾಲ್ಕೂರು ಗ್ರಾಮದ ಚತ್ರಪ್ಪಾಡಿ ಎಂಬಲ್ಲಿ ಜುಲೈ 27ರ ಮುಂಜಾನೆ ಭಾರೀ ಗಾಳಿ ಮಳೆಯಿಂದ ವೃದ್ದೆಯೊಬ್ಬರ ಮೇಲೆ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ.

ಮೃತರು ಸ್ಥಳೀಯರಾಗಿ ಪರಿಚಿತರಾದ ದಿ. ಗೋಪಾಲ ಭಂಡಾರಿ ಅವರ ಪತ್ನಿ ರುಕ್ಮಿಣಿ (62). ಅವರು ಮನೆಯಲ್ಲಿ ಒಬ್ಬರೇ ಇರುತ್ತಿದ್ದರು. ಮುಂಜಾನೆ ಮನೆಯ ಹೊರಗಡೆ ಕೆಲಸ ನಿರತರಾಗಿದ್ದಾಗ ಬಲವಾದ ಗಾಳಿಯಿಂದ ಮನೆ ಸಮೀಪದ ಮರದ ಒಂದು ಭಾಗ (ಗೆಲ್ಲು) ತುಂಡಾಗಿ ಅವರ ಮೇಲೆ ಬಿದ್ದಿದೆ. ಪರಿಣಾಮವಾಗಿ ರುಕ್ಮಿಣಿಯವರು ಮರದಡಿಯಲ್ಲಿ ಸಿಲುಕಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಸ್ಥಳೀಯರು ಘಟನೆಯ ವಿಚಾರ ತಿಳಿದು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಈ ದುರ್ಘಟನೆಯಲ್ಲಿ ಮೃತರು ತಮ್ಮ ಪುತ್ರ ಹಾಗೂ ಪುತ್ರಿಯರನ್ನು ಅಗಲಿದ್ದಾರೆ. ಗ್ರಾಮಸ್ಥರಲ್ಲಿ ದುಃಖದ ಛಾಯೆ ಮನೆಮಾಡಿದೆ.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಕಲಿ ವಸತಿಗೃಹ ವೆಬ್‌ಸೈಟ್ ಮೂಲಕ ಸೈಬರ್ ವಂಚನೆ ಆರೋಪ: ಭಕ್ತರು ಎಚ್ಚರ ವಹಿಸುವಂತೆ ಮನವಿ