ನ್ಯಾಯಾಲಯದ ಆದೇಶ ಉಲ್ಲಂಘಿಸಿದ್ದ ಆರೋಪಿತನಿಗೆ ನ್ಯಾಯಾಂಗ ಬಂಧನ.

ಉಪ್ಪಿನಂಗಡಿ: ವಾಹನ ಕಳವು ಪ್ರಕರಣದಲ್ಲಿ ಆರೋಪಿಯಾಗಿರುವ ಮಂಜೇಶ್ವರ, ಕಾಸರಗೋಡು ಮೂಲದ ಯತಿರಾಜ್ (34) ಎಂಬಾತನು 2022ರಿಂದ ತಲೆಮರೆಸಿಕೊಂಡಿದ್ದು, ಇದೀಗ ಉಪ್ಪಿನಂಗಡಿ ಪೊಲೀಸರ ಕಾರ್ಯಾಚರಣೆಯಲ್ಲಿ ಸೆರೆಸಿಕ್ಕಿದ್ದಾನೆ.

ಅ.ಕ್ರ. 58/2021 ಕಲಂ 379 ಐಪಿಸಿ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯ ಸಂದರ್ಭ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ಆರೋಪಿತನು ಎಳೆ ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಈವರೆಗೆ ನ್ಯಾಯಾಲಯವು ಏಳು ಬಾರಿ ಬಂಧನ ವಾರೆಂಟ್ ಜಾರಿ ಮಾಡಿದ್ದರೂ, ಆತನು ನ್ಯಾಯಾಲಯದ ಮುಂದೆ ಹಾಜರಾಗಿರಲಿಲ್ಲ.

ದಿನಾಂಕ 22-07-2025 ರಂದು ಉಪ್ಪಿನಂಗಡಿ ಪೊಲೀಸರು ಆರೋಪಿತನನ್ನು ಬಂಧಿಸಿ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ನ್ಯಾಯಾಧೀಶರು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಈ ಹಿಂದೆ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ ಆರೋಪಿತನು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದ ಕಾರಣ, ಈ ಹಿನ್ನೆಲೆಯಲ್ಲಿ ಅಪರಾಧ ಸಂಖ್ಯೆ 65/2025, ಕಲಂ 269 BNS 2023 ಅಡಿಯಲ್ಲಿ ಹೊಸ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

ಪುತ್ತೂರು ನಗರ, ಬಂಟ್ವಾಳ ನಗರ, ವೇಣೂರು ಪೊಲೀಸ್ ಠಾಣೆಗಳಲ್ಲಿ ಈತನು ವಾಹನ ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುವ ತನಿಖೆ ನಡೆಸಲಾಗಿದೆ. ಜೊತೆಗೆ, ಕೊಣಾಜೆ, ಕಾವೂರು, ವಿಟ್ಲ ಠಾಣೆಗಳಲ್ಲಿ ಈತನ ವಿರುದ್ಧ ಸವೆರನ್ನಾಗಿ ಸುಮಾರು ಏಳು ಪ್ರಕರಣಗಳು ದಾಖಲಾಗಿವೆ.

ಪೊಲೀಸರು ಆರೋಪಿತನ ಹಿಂದಿನ ದಾಖಲೆಗಳನ್ನು ಪರಿಶೀಲಿಸಿ, ಸಂಬಂಧಪಟ್ಟ ಠಾಣೆಗಳೊಂದಿಗೆ ಸಹಕಾರದಲ್ಲಿ ತನಿಖೆ ಮುಂದುವರೆಸಿದ್ದಾರೆ.

Post a Comment

أحدث أقدم