ದಿನಾಂಕ 27.05.2025 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಖ್ಯೆ 54/2025 (ಭಾರತೀಯ ನ್ಯಾಯಿ ಸಂಹಿತೆ ಕಲಂಗಳು 191[1], 191[2], 191[3], 118[1], 118[2], 109, 103 ಹಾಗೂ 190BNS 2023) ಅಡಿಯಲ್ಲಿ ಈಗಾಗಲೇ 09 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಈ ಪ್ರಕರಣದಲ್ಲಿ ತನಿಖೆ ಮುಂದುವರಿದಂತೆ, ಜುಲೈ 12 ರಂದು ಬಂಟ್ವಾಳ ತಾಲೂಕಿನ ಪುದು ಗ್ರಾಮದ ನಿವಾಸಿ ಪ್ರದೀಪ್ (34) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪೊಲೀಸರು ನೀಡಿದ ಮಾಹಿತಿಯಂತೆ, ತನಿಖೆ ಪ್ರಗತಿಯಲ್ಲಿದ್ದು, ಹೆಚ್ಚಿನ ಮಾಹಿತಿಗಾಗಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
ಪೊಲೀಸರು ಪ್ರಕರಣದ ಸತ್ಯಾನ್ವೇಷಣೆಯಲ್ಲಿದ್ದು, ಆರೋಪಿಗಳಿಗೆ ಸಂಬಂಧಿಸಿದಂತೆ ಸತ್ಯ ಹೊರತೆಗೆದುಕೊಳ್ಳಲು ಸೂಕ್ತ ತನಿಖಾ ಕ್ರಮಗಳು ಜಾರಿಯಲ್ಲಿವೆ ಎಂದು ತಿಳಿಸಿದ್ದಾರೆ.
Post a Comment