ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿದ SDPI ಕಾರ್ಯಕರ್ತರ ವಿರುದ್ಧ ಪುತ್ತೂರಿನಲ್ಲಿ ಕಾನೂನು ಕ್ರಮ.

ಪುತ್ತೂರು, ಜುಲೈ 2, 2025:
ಪುತ್ತೂರು ತಾಲೂಕಿನ ಕಸಬಾ ಗ್ರಾಮದ ಕಿಲ್ಲೆ ಮೈದಾನ ಬಳಿಯಲ್ಲಿ ದಿನಾಂಕ 02.07.2025ರ ಸಂಜೆ ವೇಳೆ, SDPI ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಅಕ್ರಮವಾಗಿ ಗುಂಪು ಸೇರಿ ಧ್ವನಿವರ್ಧಕ ಬಳಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಈ ಪ್ರತಿಭಟನೆಯನ್ನು ಸಂಸ್ಥೆಯ ಅಧ್ಯಕ್ಷ ಅಶ್ರಫ್ ಬಾವು ನೇತೃತ್ವ ವಹಿಸಿದ್ದರು ಎಂದು ತಿಳಿದುಬಂದಿದೆ.

ಅಂದಾಜು 30ಕ್ಕೂ ಹೆಚ್ಚು ಕಾರ್ಯಕರ್ತರು ಯಾವುದೇ ಇಲಾಖೆಯಿಂದ ಪೂರ್ವಾನುಮತಿ ಪಡೆಯದೇ ಸಾರ್ವಜನಿಕ ಸ್ಥಳದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದು, ಸಾರ್ವಜನಿಕ ಶಾಂತಿಯ ತೊಂದರೆಗೆ ಕಾರಣವಾಗಬಹುದು ಎಂಬ ಆತಂಕವೂ ವ್ಯಕ್ತವಾಗಿದೆ.

ಘಟನೆ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ 53/2025ರಂತೆ, ಭಾರತ ದಂಡ ಸಂಹಿತೆಯ ಕಲಂ 189(ಸಿ) ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 109 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ.

ಪೊಲೀಸರು ಈ ಕುರಿತು ತನಿಖೆ ಮುಂದುವರಿಸುತ್ತಿದ್ದು, ಸಾರ್ವಜನಿಕ ಶಾಂತಿ ಕಾಪಾಡಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಂಡಿದ್ದಾರೆ.

Post a Comment

أحدث أقدم