ನೆಲ್ಯಾಡಿ; ಪಿ.ಎಂ. ಶ್ರೀ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮದ ವೇಳೆ, 40 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ನಿವೃತ್ತ ಜೂನಿಯರ್ ಕಮಿಷನರ್ ಸುಬೇದಾರ್ ಕೆ. ಮಹಾಬಲ ಅವರನ್ನು ದಂಪತಿ ಸಮೇತ ಭಾವಪೂರ್ಣವಾಗಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ದಿನಕರ ಕೆ.ಎಚ್., ಮುಖ್ಯಗುರು ವೀಣಾ ಮಸ್ಕರೇನಸ್, ಗ್ರಾಮ ಪಂಚಾಯತ್ ಸದಸ್ಯರು ಜಬ್ಬಾರ್ ಮತ್ತು ಉಷಾ ಜೋಯಿ, ಎಸ್.ಡಿ.ಎಂ.ಸಿ. ಉಪಾಧ್ಯಕ್ಷರು ಹಾಗೂ ಸದಸ್ಯರು, ಶಿಕ್ಷಕ ವೃಂದ, ವಿದ್ಯಾರ್ಥಿ ನಾಯಕಿ ಹಾಗೂ ಪೋಷಕರು ಉಪಸ್ಥಿತರಿದ್ದರು.
ದೇಶಸೇವೆಗೆ ತಮ್ಮ ಜೀವನವನ್ನು ಸಮರ್ಪಿಸಿದ ಯೋಧರಿಗೆ ನೀಡಿದ ಈ ಗೌರವ ಶಾಲಾ ಸಮುದಾಯದಲ್ಲಿ ದೇಶಭಕ್ತಿಯ ಭಾವನೆ ಮೂಡಿಸಿತು.
Post a Comment