ಪುತ್ತೂರು: ದಿನಾಂಕ 22-08-2025 ರಂದು ನೆಲ್ಯಾಡಿ ಬೆಥನಿ ವಿದ್ಯಾ ಸಂಸ್ಥೆಯಲ್ಲಿ ರೋವರ್ಸ್ ಹಾಗೂ ರೇಂಜರ್ಸ್ ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಜಾರ್ಜ್ ಟಿ.ಎಸ್. ರವರು ವಹಿಸಿಕೊಂಡರು. ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕಾರ್ಯದರ್ಶಿ ಪ್ರತಿಮ್ ಕುಮಾರ್ ರವರು ಭಾಗವಹಿಸಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಅವರು ಸ್ಕೌಟ್ಸ್ ಮತ್ತು ಗೈಡ್ಸ್ ಸಂಘಟನೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ದೊರೆಯುವ ವೈಯಕ್ತಿಕ ಹಾಗೂ ಸಾಮಾಜಿಕ ಪ್ರಯೋಜನಗಳನ್ನು ವಿವರಿಸಿದರು.
ಸಂಸ್ಥೆಯ ಮುಖ್ಯ ಗುರು ಥಾಮಸ್ ಏಕೆ ಹಾಗೂ ರೇಂಜರ್ ಲೀಡರ್ ಜಿನ್ಸಿ ರವರು ಹಾಜರಿದ್ದು, ವಿದ್ಯಾರ್ಥಿಗಳಿಗೆ ಇಂತಹ ಸಂಘಟನೆಗಳು ಇಂದಿನ ದಿನಗಳಲ್ಲಿ ಅತ್ಯಂತ ಅವಶ್ಯಕವೆಂದು ಹೇಳಿದರು.
ಪ್ರಾಂಶುಪಾಲರು ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ, "ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳು ಪರಿಪೂರ್ಣ ವ್ಯಕ್ತಿತ್ವವನ್ನು ಪಡೆಯಲು ಸಾಧ್ಯ," ಎಂದು ತಿಳಿಸಿದರು.
ಕಾರ್ಯಕ್ರಮದ ನಿರೂಪಣೆ ಹಾಗೂ ಧನ್ಯವಾದ ಸಮರ್ಪಣೆಯನ್ನು ರೋವರ್ ಸ್ಕೌಟ್ ಲೀಡರ್ ಪುನೀತ್ ರವರು ನೆರವೇರಿಸಿದರು. ಸಂಸ್ಥೆಯ ಉಪನ್ಯಾಸಕರು, ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
إرسال تعليق