ಸುಬ್ರಹ್ಮಣ್ಯ: ಸ್ವಾತಂತ್ರ್ಯ ದಿನಾಚರಣೆ ಭಾವಪೂರ್ಣವಾಗಿ ನಡೆಯಿತು.

ಸುಬ್ರಹ್ಮಣ್ಯ ಮಠ ಎಜುಕೇಶನ್ ಟ್ರಸ್ಟ್ (ರಿ.), ಸುಬ್ರಹ್ಮಣ್ಯ ಇದರ ಆಡಳಿತಕ್ಕೊಳಪಟ್ಟ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಹಾಗೂ ವೇದವ್ಯಾಸ ವಿದ್ಯಾಲಯ, ಬಿಳಿನೆಲೆ ಇವುಗಳ ಜಂಟಿ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಾವಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಪ್ರಭಾಕರ್ ಮೇರುಂಜಿ ಅವರು ಧ್ವಜಾರೋಹಣಗೈದು, ದೇಶಭಕ್ತಿ ಸಂದೇಶ ನೀಡಿದರು. ಆಡಳಿತ ಮಂಡಳಿಯ ಕಾರ್ಯದರ್ಶಿ ಕೃಷ್ಣಶರ್ಮ, ಗೋಪಾಲಕೃಷ್ಣ ಪ್ರೌಢಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಮೋಹನ ಗೌಡ, ವೇದವ್ಯಾಸ ವಿದ್ಯಾಲಯದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಕೇಶವ ಗೌಡ, ನಿವೃತ್ತ ಮುಖ್ಯಗುರು ಹಿರಿಯಣ್ಣ ಗೌಡ ಎ., ಅಧ್ಯಾಪಕ-ಅಧ್ಯಾಪಕೇತರ ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

ಗೋಪಾಲಕೃಷ್ಣ ಪ್ರೌಢಶಾಲೆಯ ಮುಖ್ಯಗುರು ಸತ್ಯಶಂಕರ ಭಟ್ ಎಂ. ಸ್ವಾಗತಿಸಿ, ವೇದವ್ಯಾಸ ವಿದ್ಯಾಲಯದ ಮುಖ್ಯಗುರು ಪ್ರಶಾಂತ್ ಬಿ. ವಂದಿಸಿದರು.

ಕಾರ್ಯಕ್ರಮದಲ್ಲಿ ದೇಶಭಕ್ತಿ ಗೀತೆಗಳು, ಭಾಷಣಗಳು ಹಾಗೂ ಸಾಂಸ್ಕೃತಿಕ ಪ್ರದರ್ಶನಗಳಿಂದ ಸ್ವಾತಂತ್ರ್ಯೋತ್ಸವದ ಸಂಭ್ರಮ ಮತ್ತಷ್ಟು ಹೆಚ್ಚಿತು.

Post a Comment

أحدث أقدم