ಸುಬ್ರಹ್ಮಣ್ಯ, ಆ.26 :ಸುಬ್ರಹ್ಮಣ್ಯ ರೋಟರಿ ಕ್ಲಬ್, ಕುಕ್ಕೆ ಶ್ರೀ ಸೀನಿಯರ್ ಚೇಂಬರ್, ಇನ್ನರ್ವೆಲ್ ಕ್ಲಬ್, ವಿಕ್ರಮ ಯುವಕ ಮಂಡಲ ಬಳ್ಪ, ಶಾಸ್ತವೂ ಭಜನಾ ಮಂಡಳಿ ಬಳ್ಪ ಇವುಗಳ ಸಂಯುಕ್ತ ಆಶಯದಲ್ಲಿ ಹಾಗೂ ಸುಳ್ಯದ ಕೆವಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯವರ ಸಹಯೋಗದಲ್ಲಿ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಆಗಸ್ಟ್ 31ರಂದು ಬಳ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಜರುಗಲಿದೆ.
ಈ ಶಿಬಿರದಲ್ಲಿ ಹೃದ್ರೋಗ, ಕಿವಿ–ಗಂಟಲು–ಮೂಗು, ನೇತ್ರ, ಚರ್ಮರೋಗ, ಸ್ತ್ರೀರೋಗ, ಮಕ್ಕಳ ವಿಭಾಗ ಹಾಗೂ ಜನರಲ್ ವೈದ್ಯಕೀಯ ವಿಭಾಗಗಳಲ್ಲಿ ಕೆವಿಜಿ ಆಸ್ಪತ್ರೆಯ ನಿಪುಣ ವೈದ್ಯರು ತಪಾಸಣೆ ನಡೆಸಲಿದ್ದಾರೆ.
ಕಾರ್ಯಕ್ರಮವನ್ನು ಊರಿನ ಹಿರಿಯರಾದ ಎಣ್ಣೆ ಮಜಲು ಪಟೇಲ್ ಪುಟ್ಟಣ್ಣ ಗೌಡರು ಉದ್ಘಾಟಿಸಲಿದ್ದಾರೆ. ರೋಟರಿ ಕ್ಲಬ್ ಅಧ್ಯಕ್ಷ ಜಯಪ್ರಕಾಶ್ ಅಧ್ಯಕ್ಷತೆ ವಹಿಸಲಿದ್ದು, ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ. ಕೆ. ವಿ. ಚಿದಾನಂದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರುಗಳು ಸಹ ಹಾಜರಿರಲಿದ್ದಾರೆ.
ಸಂಸ್ಥೆಗಳ ಪ್ರತಿನಿಧಿಗಳು ಸಾರ್ವಜನಿಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆಯುವಂತೆ ಮನವಿ ಮಾಡಿದ್ದಾರೆ.
Post a Comment