ಬೆಥನಿ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ವಿಜೃಂಭಣೆಯಿಂದ ನಡೆಯಿತು.

ಕಡಬ:ಬೆಥನಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆಗಸ್ಟ್ 15, ಶುಕ್ರವಾರದಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭವ್ಯವಾಗಿ ಆಚರಿಸಲಾಯಿತು.
ಕಡಬ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ಸಲೀನ್ ಕೆ.ಪಿ. ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಅವರು ದೇಶದ ಏಳಿಗೆಗೆ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.

ಪ್ರಾಂಶುಪಾಲರಾದ ಜಾರ್ಜ್ ಟಿ.ಎಸ್. ಅವರು ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು. 8ನೇ ತರಗತಿಯ ವಿದ್ಯಾರ್ಥಿನಿ ಮೇಘನಾ ಅವರು ಹಿಂದಿಯಲ್ಲಿ ಸ್ವಾತಂತ್ರ್ಯದ ಕುರಿತು ಭಾಷಣ ಮಾಡಿದರು.

ವಿದ್ಯಾರ್ಥಿಗಳಿಂದ ದೇಶಭಕ್ತಿ ನೃತ್ಯ, ದೇಶಭಕ್ತಿ ಗೀತೆ ಸ್ಪರ್ಧೆ ಸೇರಿದಂತೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಪ್ರಾಂಶುಪಾಲರು ಸ್ವಾಗತ ಭಾಷಣ ಮಾಡಿದ್ದು, ಮುಖ್ಯಗುರು ತೋಮಸ್ ಎ.ಕೆ. ಅವರು ವಂದನಾ ಭಾಷಣ ನೀಡಿದರು. ಶಿಕ್ಷಕ ವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Post a Comment

Previous Post Next Post