ರಾಜ್ಯದ ಗಣಿಗಾರಿಕೆ ಕ್ಷೇತ್ರದ ಪ್ರಮುಖ ಸಮಸ್ಯೆಗಳ ಪರಿಹಾರಕ್ಕಾಗಿ ಇಂದು ಬೆಂಗಳೂರಿನ ವಿಧಾನಸೌಧದ ಸಭಾಂಗಣದ ಕೊಠಡಿ ಸಂಖ್ಯೆ 334ರಲ್ಲಿ ಮಹತ್ವದ ಸಭೆ ಜರಗಿತು.
ವಿಧಾನಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡು ರಾವ್, ಗಣಿ ಮತ್ತು ಭೂವಿಜ್ಞಾನ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ ಉಪಸ್ಥಿತರಿದ್ದರು.
ಸಭೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಗಣಿಗಾರಿಕೆ ಸಂಬಂಧಿಸಿದ ಸಮಸ್ಯೆಗಳು, ಅನುವುಮತಿ ಪ್ರಕ್ರಿಯೆ, ಸಾಗಾಟ ಹಾಗೂ ಕಾನೂನು ಬಾಹಿರ ಗಣಿಗಾರಿಕೆಯನ್ನು ತಡೆಗಟ್ಟುವ ಕ್ರಮಗಳು ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಿತು.
ಸಭೆಗೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸಚಿವರು, ಶಾಸಕರು ಮತ್ತು ಉನ್ನತ ಮಟ್ಟದ ಅಧಿಕಾರಿಗಳು ಭಾಗಿಯಾಗಿ ತಮ್ಮ ಅಭಿಪ್ರಾಯವನ್ನು ಮಂಡಿಸಿದರು.
ಸಭೆಯಲ್ಲಿ ಜಿಲ್ಲೆಗಳ ಗಣಿಗಾರಿಕೆ ಸಂಬಂಧಿತ ಅಡಚಣೆಗಳನ್ನು ಗಣಿ ಸಚಿವರಿಗೆ ಮನವರಿಕೆ ಮಾಡಿಕೊಡಲಾಯಿತು.
"ಸರ್ಕಾರ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಂಡು, ಸಮಸ್ಯೆಗಳ ಪರಿಹಾರ ನೀಡಲಿದೆ" ಎಂದು ಗಣಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಭರವಸೆ ನೀಡಿದರು.
ಸಭೆಯ ಅಂತ್ಯದಲ್ಲಿ ಗಣಿಗಾರಿಕೆ ಕ್ಷೇತ್ರವನ್ನು ಕಾನೂನುಬದ್ದ ರೀತಿಯಲ್ಲಿ ಸುಗಮಗೊಳಿಸುವ ಅಗತ್ಯತೆಯನ್ನು ಎಲ್ಲರೂ ಒಮ್ಮತದಿಂದ ಒತ್ತಿಹೇಳಿದರು.
Post a Comment