ಆಗಸ್ಟ್ 30, 2025 ರಂದು ಕಡಬ ತಾಲೂಕಿನ 35 ವರ್ಷದ ನಿವಾಸಿ ಕೆ. ಅಬ್ದುಲ್ ಹಕೀಂ ಅವರು ತಮ್ಮ ಸಾಮಾಜಿಕ ಜಾಲತಾಣ ಪರಿಶೀಲಿಸುವಾಗ, ಒಂದು ಫೇಸ್‌ಬುಕ್ ಖಾತೆಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯ ವಿಷಯ ಪ್ರಕಟವಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.
ದೂರಿನ ಆಧಾರದ ಮೇಲೆ ಕಡಬ ಪೊಲೀಸ್ ಠಾಣೆಯಲ್ಲಿ ಅಕ್ರಮ ಸಂಖ್ಯೆ 59/2025 ಅಡಿಯಲ್ಲಿ BNS-2023ರ ಸೆಕ್ಷನ್ 353(2), 299 ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
ಪೊಲೀಸರು ಈ ಸಂಬಂಧ ಕಾನೂನು ಕ್ರಮ ಕೈಗೊಂಡಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
Post a Comment