ಸುಬ್ರಹ್ಮಣ್ಯ ಆಗಸ್ಟ್ 12 : ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಕೊಲ್ಲುಮೊಗರು ಕೆವಿಜಿ ಪ್ರೌಢಶಾಲಾ 60 ವಿದ್ಯಾರ್ಥಿ ಗಳಿಗೆ ಉಚಿತವಾಗಿ ಯೂನಿಫಾರಂ ಗಳನ್ನು ಶುಕ್ರವಾರ ಪ್ರೌಢ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ ಅಧ್ಯಕ್ಷ ಜಯಪ್ರಕಾಶ್ ವಹಿಸಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಸುರೇಶ್ ಮುಖ್ಯ ಅತಿಥಿಯಾಗಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು,ಸದಸ್ಯರುಗಳು, ಮಕ್ಕಳ ಪೋಷಕರು,ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ ಪೂರ್ವ ಅಧ್ಯಕ್ಷರು, ಹಾಗೂ ಸದಸ್ಯರು ಇನ್ನರ್ವೇಲ್ ಕ್ಲಬ್ಬಿನ ಅಧ್ಯಕ್ಷರು ಹಾಗೂ ಸದಸ್ಯರು, ಸೀನಿಯರ್ ಚೇಂಬರ್ ಸುಬ್ರಹ್ಮಣ್ಯದ ನಿಕಟ ಪೂರ್ವ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರುಗಳು ಹಾಜರಿದ್ದರು.
Post a Comment