ರಮಾನಾಥ ರೈ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ.

ಕುಕ್ಕೆ ಸುಬ್ರಹ್ಮಣ್ಯ: ಅ,21;ಮಾಜಿ ಸಚಿವರು, ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ದಕ್ಷಿಣ ಕನ್ನಡ ರಾಜಕೀಯದಲ್ಲಿ ಹಲವು ದಶಕಗಳಿಂದ ಪ್ರಭಾವಿ ನಾಯಕತ್ವ ನೀಡಿರುವ ಶ್ರೀ ಬಿ. ರಮಾನಾಥ ರೈ ಅವರು ಇಂದು ಕುಕ್ಕೆ ಸುಬ್ರಹ್ಮಣ್ಯ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.


ಇವರು ಕುಕ್ಕೆ ಸುಬ್ರಹ್ಮಣ್ಯ ದೇವರ ಆಶ್ಲೇಷ ಬಲಿ, ಅಭಿಷೇಕ ಪೂಜೆ ಸೇರಿದಂತೆ ವಿಶೇಷ ಸೇವೆಗಳನ್ನು ಸಲ್ಲಿಸಿ, ದೇವರ ಕೃಪೆಗೆ ಮಸ್ತಕ ವಂದಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ, ಸಮಿತಿ ಸದಸ್ಯ ಅಶೋಕ್ ನೇಕ್ರಾಜೆ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಸೌತಡ್ಕ ಮಹಾಗಣಪತಿ ದೇವಸ್ಥಾನ ಸಮಿತಿ ಅಧ್ಯಕ್ಷರಾದ ಪ್ರಶಾಂತ್, ಕುಕ್ಕೆ ಸುಬ್ರಹ್ಮಣ್ಯ ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯ ಪವನ್, ಸ್ಥಳೀಯ ಮುಖಂಡರಾದ ಕಿಶೋರ್ ಆರಂಪಾಡಿ, ಶೇಷ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ರಾಜಕೀಯ ಜೀವನದಲ್ಲಿ ಸದಾ ಸರಳತೆ, ಬದ್ಧತೆ ಹಾಗೂ ಅಭಿವೃದ್ಧಿ ಕಾರ್ಯಗಳಿಂದ ಹೆಸರಾಗಿರುವ ರಮಾನಾಥ ರೈ ಅವರು ಪ್ರತೀ ವರ್ಷವೂ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಆಗಮಿಸಿ ವಿಶೇಷ ಸೇವೆ ಸಲ್ಲಿಸುವುದು ಪದ್ಧತಿಯಾಗಿದೆ.

Post a Comment

Previous Post Next Post