20-08-2025 ರಂದು ನೆಲ್ಯಾಡಿ ಪೇಟೆಯಲ್ಲಿ ಒಬ್ಬ ಅಪರಿಚಿತ ವ್ಯಕ್ತಿ ತಲೆ ತಿರುಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಿದ್ದ ಪರಿಣಾಮವಾಗಿ ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವವಾಗಿರುವುದರಿಂದ ತಕ್ಷಣವೇ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಯಿತು.
ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡ ವ್ಯಕ್ತಿ ಮಾತನಾಡಲು ಅಸಮರ್ಥರಾಗಿರುವುದರಿಂದ ಅವರ ಗುರುತು ಇನ್ನೂ ಪತ್ತೆಯಾಗಿಲ್ಲ.
ಇವರನ್ನು ಪರಿಚಯ ಹೊಂದಿರುವವರು ತಕ್ಷಣ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಲು ವಿನಂತಿಸಲಾಗಿದೆ.
إرسال تعليق