ನೆಲ್ಯಾಡಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ನೆಲ್ಯಾಡಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಹರ್ಷೋಲ್ಲಾಸದಿಂದ ಆಚರಿಸಲಾಯಿತು. ಸಂಘದ ಅಧ್ಯಕ್ಷ ಗುರುಪ್ರಸಾದ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ಕಾಂತಪ್ಪ ಗೌಡ ಮಹಾಬಲ ಶೆಟ್ಟಿ, ಜಯರಾಮ್ ಬಾಣಜಾಲ್, ಉಮೇಶ್ ಪಿ, ಕಾರ್ಯದರ್ಶಿ ಅನುರಾಧ, ಸದಸ್ಯರು ಹಾಗೂ ಸಿಬ್ಬಂದಿವರ್ಗ ಹಾಜರಿದ್ದರು. ಕಾರ್ಯಕ್ರಮದಲ್ಲಿ ದೇಶಭಕ್ತಿ ಗೀತೆಗಳು ಹಾಡಲ್ಪಟ್ಟು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸಲಾಯಿತು.


Post a Comment

Previous Post Next Post