🌸 ನೆಲ್ಯಾಡಿ ಸಾರ್ವಜನಿಕ ಗಣೇಶೋತ್ಸವದ ಕ್ರೀಡಾಕೂಟಕ್ಕೆ ಭವ್ಯ ಉದ್ಘಾಟನೆ 🌸
ನೆಲ್ಯಾಡಿ:ಆಗಸ್ಟ್ 24 ರಂದು ನೆಲ್ಯಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಶಬರೀಶ ಕಲಾಮಂದಿರದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ಆಯೋಜಿಸಲಾದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಭವ್ಯವಾಗಿ ನೆರವೇರಿತು.
ಸಮಿತಿಯ ಅಧ್ಯಕ್ಷ ಮೋಹನ್ ಕುಮಾರ್ ಕಟ್ಟೆಮಜಲು ಸಭಾಧ್ಯಕ್ಷತೆ ವಹಿಸಿದ್ದು, ನೆಲ್ಯಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ್ ಕುಮಾರ್ ಗೌಡ ದೊಂತಿಲ ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾದ ಉದಯ್ ಕುಮಾರ್ ಶೆಟ್ಟಿ ಗೊಳಿತೊಟ್ಟು ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಕೆ.ಎಸ್ ಕಾರ್ಯಕ್ರಮದಲ್ಲಿ ಮಾತನಾಡಿ ಸಂಘಟಕರನ್ನು ಅಭಿನಂದಿಸಿದರು.
ವೇದಿಕೆಯಲ್ಲಿ ಸಮಿತಿಯ ಕಾರ್ಯದರ್ಶಿ ಅಣ್ಣಿ ಎಲ್ತೀಮಾರ್, ಕೋಶಾಧಿಕಾರಿ ರಾಕೇಶ್ ಎಸ್., ಉಪಾಧ್ಯಕ್ಷ ಚಂದ್ರಶೇಖರ ಪೇರಣ, ದೇವಸ್ಥಾನದ ಉಪಾಧ್ಯಕ್ಷ ರವಿಚಂದ್ರ ಹೊಸವೊಕ್ಲು ಉಪಸ್ಥಿತರಿದ್ದರು.
ರವಿಪ್ರಸಾದ್ ಗುತ್ತಿನ ಮನೆ ಸ್ವಾಗತಿಸಿ, ರವಿಚಂದ್ರ ಹೊಸವೊಕ್ಲು ಧನ್ಯವಾದ ಸಲ್ಲಿಸಿದರು. ದೀಪಕ್ ಕಾರ್ಯಕ್ರಮವನ್ನು ನಿರೂಪಿಸಿದರು. ನಂತರ ನಡೆದ ಕ್ರೀಡಾಕೂಟವನ್ನು ಸುರೇಶ್ ಪಡಿಪಂಡ ನಿರೂಪಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ಏರ್ಪಡಿಸಲಾಗಿದ್ದು, ಸ್ಥಳೀಯ ಯುವಜನತೆಯ ಉತ್ಸಾಹಭರಿತ ಭಾಗವಹಿಸುವಿಕೆ ಗಮನ ಸೆಳೆಯಿತು.
إرسال تعليق