ಸಾಮಾಜಿಕ ಜಾಲತಾಣದಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆಯಾದ ಸುದ್ದಿ – ಪುತ್ತೂರಿನಲ್ಲಿ ಪ್ರಕರಣ ದಾಖಲು.

ಪುತ್ತೂರು:ಸಾಮಾಜಿಕ ಜಾಲತಾಣ ‘ಫೇಸ್‌ಬುಕ್’ನಲ್ಲಿ “ಭಾರತೀಯ ಸೇನೆ” ಎಂಬ ಪೇಜ್ ಮೂಲಕ ಧರ್ಮಗಳ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗುವಂತೆ, ಕೋಮು ಸೌಹಾರ್ದತೆಗೆ ಧಕ್ಕೆಯಾಗುವ ರೀತಿಯಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿದ ಪ್ರಕರಣ ಪತ್ತೆಯಾಗಿದೆ.

ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿರುವುದರಿಂದ, ಪುತ್ತೂರು ನಗರ ಪೊಲೀಸ್ ಠಾಣೆಯವರು ಸ್ವಯಂ ಪ್ರೇರಿತವಾಗಿ (ಸುಮೋಟೋ) ಪ್ರಕರಣ ದಾಖಲಿಸಿದ್ದಾರೆ. 2025ರ ಆಗಸ್ಟ್ 10ರಂದು ದಾಖಲಾಗಿರುವ ಅ.ಕ್ರ: 70/2025ರಲ್ಲಿ, ಕಲಂ 196(1)(a), 353(2) BNS 2023 ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದು, ಸಾಮಾಜಿಕ ಜಾಲತಾಣದ ಮೂಲಕ ತಪ್ಪು ಮಾಹಿತಿ ಹಂಚುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

Post a Comment

Previous Post Next Post