ಪುತ್ತೂರು: ಪುತ್ತೂರು ನಗರ ಠಾಣಾ ಅಕ್ರ:200/2017ರ ಕಲಂ 392 ಐಪಿಸಿ ಹಾಗೂ 25, 27 ಆರ್ಮ್ಸ್ ಆಕ್ಟ್ ಪ್ರಕರಣದಲ್ಲಿ ಆರೋಪಿಯಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಹಲವಾರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿ ಕೇರಳದ ತ್ರಿಶೂರ್ ಜಿಲ್ಲೆಯ ನಿವಾಸಿ ಇಲಿಯಾಸ್ ಪಿ.ಎ ಅವರನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಅರುಣ್ ನಾಗೇಗೌಡ ರವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ಪೊಲೀಸ್ ಉಪನಿರೀಕ್ಷಕ ಕೌಶಿಕ್ ರವರ ನೇತೃತ್ವದ ವಿಶೇಷ ತಂಡ — ಹೆಚ್.ಸಿ. 685 ಪ್ರಶಾಂತ್ ರೈ, ಹೆಚ್.ಸಿ. 1028 ಗಣೇಶ್, ಸಿಪಿಸಿ 1944 ಮ್ಯಾಥ್ಯೂ ವರ್ಗೀಸ್ ಹಾಗೂ ಸಿಪಿಸಿ 2283 ಶ್ರೀಶೈಲ ಎಂ.ಕೆ. — ಕೇರಳದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಸದರಿ ಆರೋಪಿಯ ವಿರುದ್ಧ ಪುತ್ತೂರು ನಗರ, ಉಪ್ಪಿನಂಗಡಿ ಹಾಗೂ ಧರ್ಮಸ್ಥಳ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿರುವುದಲ್ಲದೇ, ಕೇರಳ ರಾಜ್ಯದ ತ್ರಿಶೂರ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಸುಮಾರು 20 ಪ್ರಕರಣಗಳು ದಾಖಲಾಗಿವೆ.
ಪೊಲೀಸರ ಈ ಯಶಸ್ವಿ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
إرسال تعليق