ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಇಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮೂರುಳ್ಯ ರವರಿಂದ ಗುದ್ದಲಿ ಪೂಜೆ ನೆರವೇರಿಸಲಾಯಿತು. ₹65 ಲಕ್ಷ ಕೇಂದ್ರ ಸರಕಾರದ ಅನುದಾನದಿಂದ ಈ ಕೇಂದ್ರ ನಿರ್ಮಾಣವಾಗಲಿದ್ದು, ಗ್ರಾಮೀಣ ಪ್ರದೇಶದ ಜನತೆಗೆ ಉತ್ತಮ ಹಾಗೂ ಸುಲಭ ಆರೋಗ್ಯ ಸೇವೆಗಳನ್ನು ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ, ಉಪಾಧ್ಯಕ್ಷರು, ಸದಸ್ಯರು, ಪ್ರಮುಖರಾದ ರಾಕೇಶ್ ರೈ ಕೆಡೆಂಜಿ, ದಿನೇಶ್ ಮೇದು, ಇಂದಿರಾ ಬಿ.ಕೆ, ಆಶಾ ಕಾರ್ಯಕರ್ತೆರು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
Post a Comment