ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸಭೆ ಇಂದು ಬೆಂಗಳೂರಿನ ವಿಧಾನಸೌಧದ ಸಮ್ಮೆಳನ ಸಭಾಂಗಣದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಭೆಯಲ್ಲಿ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಭಾಗವಹಿಸಿ ಸಮಾಜ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನ, ಪ್ರಯೋಜನಗಳ ಹಂಚಿಕೆ, ಹಾಗು ಕ್ಷೇತ್ರದಲ್ಲಿ ಎದುರಾಗುತ್ತಿರುವ ತೊಂದರೆಗಳು ಹಾಗೂ ಕುಂದುಕೊರತೆಗಳನ್ನು ಸಭೆಯ ಮುಂದಿಡಿದರು.
ಸಭೆಯ ಸಂದರ್ಭದಲ್ಲಿ ಕ್ಷೇತ್ರದ ಜನರಿಗೆ ತಲುಪಬೇಕಾದ ಸೌಲಭ್ಯಗಳನ್ನು ಶೀಘ್ರ ತಲುಪುವಂತೆ ಹಾಗೂ ಇಲಾಖೆಯ ಕಾರ್ಯವಿಧಾನದಲ್ಲಿ ಸುಧಾರಣೆ ತರಬೇಕೆಂಬ ವಿಷಯಗಳನ್ನು ಚರ್ಚಿಸಲಾಯಿತು.
ಮುಖ್ಯಮಂತ್ರಿಗಳು ಹಾಗೂ ಅಧಿಕಾರಿಗಳು ಶಾಸಕಿ ಮಂಡಿಸಿದ ಅಂಶಗಳನ್ನು ಗಮನವಿಟ್ಟು ಆಲಿಸಿ, ತಕ್ಕ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉನ್ನತಾಧಿಕಾರಿಗಳು, ಸಮಿತಿಯ ಸದಸ್ಯರು ಹಾಗೂ ವಿವಿಧ ಇಲಾಖೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.
Post a Comment