ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಸುಬ್ರಹ್ಮಣ್ಯದಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸಂಘ ರಚನೆ ಯಶಸ್ವಿಯಾಗಿ ನೆರವೇರಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಸಂಘದ ಹೊಸ ಪದಾಧಿಕಾರಿಗಳನ್ನು ಪ್ರಕಟಿಸಲಾಯಿತು.
ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಕುಮಾರಿ ನಿಶಾ ಗೌರಿ ಎಂ ಅವರನ್ನು ಆಯ್ಕೆ ಮಾಡಲಾಗಿದೆ.
ಉಪಾಧ್ಯಕ್ಷರಾಗಿ ತೃತೀಯ ಬಿಎ ವಿದ್ಯಾರ್ಥಿ ಕೀರ್ತನ್ ಬಿ.ಎಲ್ ಹಾಗೂ
ಕಾರ್ಯದರ್ಶಿಯಾಗಿ ದ್ವಿತೀಯ ಬಿಬಿಎ ವಿದ್ಯಾರ್ಥಿನಿ ಕುಮಾರಿ ದೀಕ್ಷಾ ಎಂ.ಕೆ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದು, ಹೊಸದಾಗಿ ಆಯ್ಕೆಯಾದ ವಿದ್ಯಾರ್ಥಿ ಸಂಘಕ್ಕೆ ಹಾರ್ದಿಕ ಅಭಿನಂದನೆ ಸಲ್ಲಿಸಿದರು.
✨ ವಿದ್ಯಾರ್ಥಿ ಸಂಘದ ನೂತನ ತಂಡದಿಂದ ಕಾಲೇಜಿನ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಹೊಸ ಚೈತನ್ಯ ಸಿಗಲಿದೆ ಎಂಬ ವಿಶ್ವಾಸವನ್ನು ಎಲ್ಲರೂ ವ್ಯಕ್ತಪಡಿಸಿದರು.
Post a Comment