ಮಣಿ ಪ್ರಕಾಶ್ ಕಡೋಡಿ ಪ್ರಥಮ ಸ್ಥಾನ – ಜಿಲ್ಲಾ ಮಟ್ಟಕ್ಕೆ ಆಯ್ಕೆ.


ಬಂಟ್ವಾಳ
:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ, ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇವುಗಳ ಸಹಯೋಗದಲ್ಲಿ ನಡೆದ 14 ರಿಂದ 17 ವರ್ಷದ ವಯೋಮಾನದ ಬಾಲಕ–ಬಾಲಕಿಯರ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪುಂಜಾಲಕಟ್ಟೆಯ ಶ್ರೀ ನಾರಾಯಣ ಗುರು ವಸತಿ ಶಾಲೆಯ ವಿದ್ಯಾರ್ಥಿ ಮಣಿ ಪ್ರಕಾಶ್ ಕಡೋಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಚಂದ್ರಶೇಖರ ಕಡೋಡಿ ಮತ್ತು ಭಾರತಿ ದಂಪತಿಗಳ ಪುತ್ರನಾದ ಮಣಿ ಪ್ರಕಾಶ್, ಪ್ರಸ್ತುತ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರಿನ ಅಮರ ಯೋಗ ತರಬೇತಿ ಕೇಂದ್ರದಲ್ಲಿ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

ಮಣಿ ಪ್ರಕಾಶ್ ಅವರು ಪೂರ್ವದಲ್ಲಿ ಸ.ಕಿ.ಪ್ರಾ. ವಾಲ್ತಾಜೆ ಪಿ.ಯಂ. ಶ್ರೀ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರಿನ ಹಳೆವಿದ್ಯಾರ್ಥಿಯಾಗಿದ್ದು, ಈಗ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವುದು ಬಂಟ್ವಾಳ ತಾಲೂಕಿನಲ್ಲಿ ಗಮನ ಸೆಳೆದಿದೆ.

ಪ್ರತಿಸ್ಪರ್ಧಾತ್ಮಕ ಯೋಗಾಸನ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ಮಣಿ ಪ್ರಕಾಶ್ ಅವರನ್ನು ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ತುಂಗಪ್ಪ ಬಂಗೇರರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆಯ ಪ್ರಾಂಶುಪಾಲ ಸಂತೋಷ್, ದೈಹಿಕ ಶಿಕ್ಷಕರು, ಗುರುಗಳು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Post a Comment

Previous Post Next Post