ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ರ:125/2025 ದಾಖಲಾಗಿ, ಕಲಂ 303(2) BNS, ಕಲಂ 4,12 ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ–2020 ಹಾಗೂ ಕಲಂ 11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿತ್ತು.
ಬಂಧಿತರ ವಿವರಗಳು:
1. ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34)
2. ಮಂಗಳೂರು ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ (48)
3. ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18)
ಪೊಲೀಸರು ಸೆಪ್ಟೆಂಬರ್ 5, 2025 ರಂದು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
🔎 ವಿಚಾರಣೆಯ ವೇಳೆ, ಇದೇ ಆರೋಪಿಗಳು ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಕ್ರ:76/2025 ಪ್ರಕರಣದಲ್ಲೂ ಭಾಗಿಯಾಗಿರುವುದು ಪತ್ತೆಯಾಗಿದೆ. ಆ ಪ್ರಕರಣವು ಭಾರತೀಯ ನ್ಯಾಯ ಸಂಹಿತೆ 2023 (Sec: 331(4), 305) ಹಾಗೂ ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ–2020 (Sec: 4,5) ಅಡಿಯಲ್ಲಿ ದಾಖಲಾಗಿತ್ತು.
👉 ಪ್ರಕರಣದ ತನಿಖೆ ಮುಂದುವರಿಯುತ್ತಿದೆ.
Post a Comment