ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಸ್ಟ್ 29ರಂದು ರಾತ್ರಿ ಬಾಂಬ್ ಬೆದರಿಕೆ ಕರೆ ಬಂದ ಘಟನೆ ಬೆಳಕಿಗೆ ಬಂದಿದೆ.
ಅನಾಮಿಕ ವ್ಯಕ್ತಿ ಟರ್ಮಿನಲ್ ಮ್ಯಾನೇಜರ್‌ಗೆ ಫೋನ್ ಮಾಡಿ, “ಟರ್ಮಿನಲ್ ಬಿಲ್ಡಿಂಗ್ ಖಾಲಿ ಮಾಡದಿದ್ದರೆ ಅದನ್ನು ಧ್ವಂಸ ಮಾಡುತ್ತೇನೆ” ಎಂದು ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತನಿಖೆ ಕೈಗೊಂಡ ಪೊಲೀಸರು, ತಮಿಳುನಾಡಿನ ವೆಲ್ಲೂರು ಜಿಲ್ಲೆಯ 38 ವರ್ಷದ ಸಸಿಕುಮಾರ್ ಎಂಬಾತನನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ವಿಚಾರಣೆ ವೇಳೆ ಆತ ಸಾಮಾಜಿಕ ಜಾಲತಾಣಗಳಿಂದ ದೇಶದ ವಿಮಾನ ನಿಲ್ದಾಣಗಳ ದೂರವಾಣಿ ಸಂಖ್ಯೆಯನ್ನು ಸಂಗ್ರಹಿಸಿ, ಹಲವು ಕಡೆ ಇದೇ ರೀತಿಯ ಬೆದರಿಕೆ ಕರೆಗಳನ್ನು ಮಾಡುತ್ತಿದ್ದನೆಂದು ಒಪ್ಪಿಕೊಂಡಿದ್ದಾನೆ.
ಪ್ರಸ್ತುತ ಆರೋಪಿ ಸಸಿಕುಮಾರ್‌ನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಮಂಗಳೂರು ನಗರ ಪೊಲೀಸರು ತಿಳಿಸಿದ್ದಾರೆ.
Post a Comment