ನೆಲ್ಯಾಡಿ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಓಣಂ ಹಬ್ಬದ ಆಚರಣೆ.

ನೆಲ್ಯಾಡಿ: ವಿಶ್ವವಿದ್ಯಾನಿಲಯ ಕಾಲೇಜು ನೆಲ್ಯಾಡಿಯಲ್ಲಿ ದಿನಾಂಕ 06-09-2025 ಶನಿವಾರದಂದು ಓಣಂ ಹಬ್ಬವನ್ನು ಭಾವಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮವು ಕಾಲೇಜಿನ ಸಂಯೋಜಕರಾದ ಡಾ. ಸುರೇಶ್ ಅವರ ಅನುಮತಿಯಿಂದ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಸಭಾಧ್ಯಕ್ಷರಾಗಿ ಇತಿಹಾಸ ವಿಭಾಗದ ಉಪನ್ಯಾಸಕರಾದ ಡಾ. ಸೀತಾರಾಮ ಪಿ. ಅವರು ಉಪಸ್ಥಿತರಿದ್ದು, “ಯಾವುದೇ ಹಬ್ಬವು ಅದರ ಮೂಲ ಮೌಲ್ಯಗಳನ್ನು ಉಳಿಸಿಕೊಂಡು, ಸಾಮಾಜಿಕವಾಗಿ ಅನ್ವಯಿಸಿದಾಗ ಪ್ರಸ್ತುತತೆಯನ್ನು ಉಳಿಸಿಕೊಳ್ಳುತ್ತದೆ” ಎಂದು ಹೇಳಿದರು.

ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕನ್ನಡ ವಿಭಾಗದ ಉಪನ್ಯಾಸಕರಾದ ಡಾ. ಆನಂದ ಎಂ. ಕಿದೂರು ಅವರು ಓಣಂ ಹಬ್ಬದ ಐತಿಹಾಸಿಕ ಹಾಗೂ ಪೌರಾಣಿಕ ಹಿನ್ನೆಲೆಯನ್ನು ವಿವರಿಸಿದರು. ಜೊತೆಗೆ ಹಬ್ಬದ ಅಂಗವಾಗಿ ನಡೆಯುವ ಊಟದ ವೈವಿಧ್ಯತೆ ಹಾಗೂ ಆಟೋಟ ಸ್ಪರ್ಧೆಗಳ ವಿಶೇಷತೆಯನ್ನು ಪರಿಚಯಿಸಿದರು.

ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಪಾವನ ಅವರು ಸ್ವಾಗತ ಕೋರಿದರು. ತೃತೀಯ ಬಿಕಾಂ ವಿದ್ಯಾರ್ಥಿನಿ ಕುಮಾರಿ ವೀಕ್ಷಾ ಧನ್ಯವಾದ ಸಮರ್ಪಿಸಿದರು. ಕುಮಾರಿ ವೃಂದಾ ಹಾಗೂ ಕುಮಾರಿ ಜಯಶ್ರೀ (ತೃತೀಯ ಬಿಕಾಂ) ಕಾರ್ಯಕ್ರಮವನ್ನು ನಿರೂಪಿಸಿದರು.

ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು.

Post a Comment

Previous Post Next Post