ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಸೆಪ್ಟೆಂಬರ್ 15ರಂದು ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಭಿಯಂತರರ ದಿನಾಚರಣೆ ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮದ ಆರಂಭದಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಬಳಿಕ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಶ್ರೀ ಹರಿಪ್ರಸಾದ್ ರೈ ಅವರು ವಿಶ್ವೇಶ್ವರಯ್ಯನವರ ಜೀವನಯಾಣ, ಸಾಧನೆ ಹಾಗೂ ದೇಶ-ವಿದೇಶಕ್ಕೆ ನೀಡಿದ ಕೊಡುಗೆಗಳ ಕುರಿತಾಗಿ ಕಿರು ಪರಿಚಯ ನೀಡಿದರು.
ಸಂಸ್ಥೆಯ ಪ್ರಾಚಾರ್ಯರು ಶುಭಾಶಯಗಳನ್ನು ತಿಳಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಕಿರಿಯ ತರಬೇತಿ ಅಧಿಕಾರಿ ಶ್ರೀ ಸುಬ್ರಾಯ ನಾಯಕ್ ರವರು ಪ್ರಾಸ್ತಾವಿಕ ಹಾಗೂ ಸ್ವಾಗತವನ್ನು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
إرسال تعليق