ಸುಳ್ಯ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಅಜ್ಜಾವರ ಪೇಟೆಯಲ್ಲಿ ಅಡಿಕೆ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ದಿನಾಂಕ 12.09.2025ರಂದು ರಾತ್ರಿ, ಅಜ್ಜಾವರ ಪೇಟೆಯ ದಿನಸಿ ಅಂಗಡಿ ಮಾಲಕರಾದ ಮಹಮ್ಮದ್ ರಫೀಕ್ ಎಸ್ ಡಿ ಅವರ ಅಡಿಕೆ ಸಂಗ್ರಹಿಸುವ ಗೋಡೌನ್‌ನಿಂದ ಕಳ್ಳರು ಸುಮಾರು 1 ಕ್ವಿಂಟಲ್ ಅಡಿಕೆ ಕಳವು ಮಾಡಿಕೊಂಡು ಹೋಗಿದ್ದ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 103/2025, ಕಲಂ 331(4), 305(ಎ), 3(5) ಬಿಎನ್‌ಎಸ್-2023ರಂತೆ ಪ್ರಕರಣ ದಾಖಲಾಗಿತ್ತು.
ಪೊಲೀಸರು ತನಿಖೆ ಕೈಗೊಂಡು, ದಿನಾಂಕ 19.09.2025ರಂದು ಸುಳ್ಯ ತಾಲೂಕು ಮಂಡೆಕೋಲು ಗ್ರಾಮದ ಮುರೂರು ಚೆಕ್‌ಪೋಸ್ಟ್ ಬಳಿ ಆರೋಪಿಗಳನ್ನು ವಶಕ್ಕೆ ಪಡೆದರು. ಬಂಧಿತರು:
1. ಸುಪ್ರಿತ್ ಕೆ (22) – ಮಂಡೆಕೋಲು ಗ್ರಾಮ, ಸುಳ್ಯ ತಾಲೂಕು
2. ಮಹಮ್ಮದ್ ಸಿನಾನ್ (21) – ಜಾಲ್ಸೂರು ಗ್ರಾಮ, ಸುಳ್ಯ ತಾಲೂಕು
ಆರೋಪಿಗಳು ಕಳವು ಮಾಡಿದ ಅಡಿಕೆ ಸಾಗಾಟ ಮಾಡಲು ಬಳಸಿದ ಕೆಎ 21 ಸಿ 5862 ನಂಬರಿನ ಆಟೋ ರಿಕ್ಷಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
إرسال تعليق