ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಅಶ್ರಫ್ @ ಚಿಲ್ಲಿ ಅಶ್ರಫ್ (32), ಕೂಳೂರು ಗ್ರಾಮ, ಮಂಜೇಶ್ವರ ತಾಲೂಕು ಎಂಬಾತನನ್ನು ಸೆಪ್ಟೆಂಬರ್ 21, 2025ರಂದು ಕೂಳೂರು ಮಂಜೇಶ್ವರ ಪ್ರದೇಶದಲ್ಲಿ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
🔹 ಪ್ರಕರಣ 1:
ವಿಟ್ಲ ಪೊಲೀಸ್ ಠಾಣಾ ಅ.ಕ್ರ. 165/2015, ಕಲಂ 397 IPC
2015ರ ಆಗಸ್ಟ್ 7ರಂದು ವಿಟ್ಲ ಪೇಟೆಯಲ್ಲಿ ಜಗದೀಶ್ ಕಾಮತ್ ಎಂಬವರಿಗೆ ಮೆಣಸಿನ ಪುಡಿ ಎರಚಿ ದರೋಡೆ ಮಾಡಿದ ಪ್ರಕರಣ. ಈ ಪ್ರಕರಣದಲ್ಲಿ ದಸ್ತಗಿರಿಯಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ವಿರುದ್ಧ LPC-03/2025 ರಂತೆ ವಾರೆಂಟ್ ಜಾರಿಯಾಗಿತ್ತು.
🔹 ಪ್ರಕರಣ 2:
ವಿಟ್ಲ ಪೊಲೀಸ್ ಠಾಣಾ ಅ.ಕ್ರ. 16/2016, ಕಲಂ 457, 380 IPC
2016ರ ಜನವರಿ 23ರಂದು ಕೊಲ್ನಾಡು ಗ್ರಾಮದ ವೈನ್ ಶಾಪ್‌ನ ಬಾಗಿಲು ಮುರಿದು ನಗದು ಕಳ್ಳತನ ಮಾಡಿದ ಪ್ರಕರಣ. ಈ ಪ್ರಕರಣದಲ್ಲಿಯೂ ದಸ್ತಗಿರಿಯಾಗದೆ ತಲೆಮರೆಸಿಕೊಂಡಿದ್ದು, ಆರೋಪಿಯ ವಿರುದ್ಧ ನ್ಯಾಯಾಲಯವು 82 & 83 ವಾರಂಟ್ ಜಾರಿಗೊಳಿಸಿತ್ತು.
ಈ ಎರಡೂ ಪ್ರಕರಣಗಳಲ್ಲಿ ಆರೋಪಿ ಪತ್ತೆಯಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
إرسال تعليق