ಬಿಸ್ಲೆಘಾಟ್‌ನಲ್ಲಿ ಭೀಕರ ಅಪಘಾತ — ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ.

ಕುಕ್ಕೆ ಸುಬ್ರಮಣ್ಯ:ಮದುವೆ ಸಂಭ್ರಮಕ್ಕೆ ಆಗಮಿಸುತ್ತಿದ್ದವರ ಸಂಚಾರ ದುಃಖದಲ್ಲಿ ಅಂತ್ಯಗೊಂಡ ಘಟನೆ ಇಂದು ಮುಂಜಾನೆ ಬಿಸ್ಲೆಘಾಟ್‌ನಲ್ಲಿ ನಡೆದಿದೆ. ಮದುವೆಗೆಂದು ಕುಕ್ಕೆ ಸುಬ್ರಮಣ್ಯದತ್ತ ತೆರಳುತ್ತಿದ್ದ ಟೆಂಪೋ ವಾಹನವು ಬಿಸ್ಲೆಘಾಟ್ ತಿರುವಿನಲ್ಲಿ ಸುಮಾರು 25 ಅಡಿ ಆಳಕ್ಕೆ ಉರುಳಿ ಬಿದ್ದ ಪರಿಣಾಮ, 22 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.



ಅಪಘಾತದ ನಂತರ ಸ್ಥಳೀಯರು ಮತ್ತು ಪೊಲೀಸ್ ಸಿಬ್ಬಂದಿ ಶೀಘ್ರವಾಗಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ಪ್ರಥಮ ಚಿಕಿತ್ಸೆಗಾಗಿ ಕುಕ್ಕೆ ಸುಬ್ರಮಣ್ಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಬಳಿಕ, ಅಲ್ಲಿ ಚಿಕಿತ್ಸೆ ಪಡೆದವರಲ್ಲಿ ಸ್ಥಿತಿ ಗಂಭೀರವಾಗಿದ್ದವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆ ಹಾಗೂ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅಪಘಾತದ ನಿಖರ ಕಾರಣ ತಿಳಿದುಬಂದಿಲ್ಲದಿದ್ದರೂ, ಬಿಸ್ಲೆಘಾಟ್ ತಿರುವಿನ ತೀವ್ರ ಇಳಿಜಾರಿನಿಂದ ವಾಹನದ ನಿಯಂತ್ರಣ ತಪ್ಪಿರುವ ಸಾಧ್ಯತೆ ವ್ಯಕ್ತವಾಗಿದೆ.

New update;

ಸಕಲೇಶಪುರ ತಾಲ್ಲೂಕಿನ ವನಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಪ್ರಯಾಣಿಕರ ವ್ಯಾನ್ ಬಿಸ್ಲೆ ಘಾಟ್ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸುಮಾರು 20 ಅಡಿ ಆಳಕ್ಕೆ ಪಲ್ಟಿಯಾಗಿದ ಪರಿಣಾಮ ದುರ್ಘಟನೆ ಸಂಭವಿಸಿದೆ. ಈ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
.              ಶಿವರಾಜ್ (50) 
ವ್ಯಾನ್‌ನಲ್ಲಿ ಒಟ್ಟು 30 ಮಂದಿ ಪ್ರಯಾಣಿಸುತ್ತಿದ್ದು, ಇವರಲ್ಲಿ 20 ಮಂದಿ ಗಾಯಗೊಂಡಿದ್ದಾರೆ. 7 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡಿದ್ದ ಶಿವರಾಜ್ (50) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಮಾಹಿತಿ ಲಭ್ಯವಾಗಿದೆ.

Post a Comment

Previous Post Next Post