ಸುಬ್ರಹ್ಮಣ್ಯ: ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಸಚಿನ್ ಕ್ರೀಡಾ ಸಂಘ (ರಿ.) ಹರಿಹರ ಪಳ್ಳತ್ತಡ್ಕ, ಗ್ರಾಮ ಪಂಚಾಯತ್ ಹರಿಹರ ಪಳ್ಳತ್ತಡ್ಕ ಹಾಗೂ ಶ್ರೀ ಹರಿಹರೇಶ್ವರ ದೇವಸ್ಥಾನ ಹರಿಹರ ಪಳ್ಳತ್ತಡ್ಕ ಇವುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು ಮತ್ತು ಅಶ್ವಿನ್ ಆಪ್ಟಿಕಲ್ಸ್ & ಕ್ಲಿನಿಕ್ಸ್ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಕನ್ನಡಕ ವಿತರಣೆ ಕಾರ್ಯಕ್ರಮ ಸೋಮವಾರ ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ರೋಟರಿ ಕ್ಲಬ್ ಅಧ್ಯಕ್ಷ ಜಯಪ್ರಕಾಶ್ ಆರ್. ಅಧ್ಯಕ್ಷತೆ ವಹಿಸಿದ್ದರು.
ಶಿಬಿರವನ್ನು ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕಿಶೋರ್ ಕುಮಾರ್ ಕೂಜುಗೋಡು ಉದ್ಘಾಟಿಸಿ ಶುಭಹಾರೈಸಿದರು.
ಈ ಸಂದರ್ಭ ಹಿರಿಯ ನೇತ್ರ ಪರಿವೀಕ್ಷಕ ಎಸ್. ಶಾಂತರಾಜ್, ಅಶ್ವಿನ್ ಆಪ್ಟಿಕಲ್ಸ್ ಮತ್ತು ಕ್ಲಿನಿಕ್‌ನ ವೈದ್ಯ ಡಾ. ವಿಕಾಸ್ ಎಸ್.ಎಂ, ನೇತ್ರ ತಜ್ಞ ಡಾ. ಅಶ್ವಿನ್ ಸಾಗರ್, ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ ಕುಮಾರ್ ಅಂಙಣ, ಸಚಿನ್ ಕ್ರೀಡಾ ಸಂಘದ ಅಧ್ಯಕ್ಷ ಮನೀಷ್ ಪಳ್ಳತ್ತಡ್ಕ, ರೋಟರಿ ಕ್ಲಬ್‌ನ ಪೂರ್ವ ಸಹಾಯಕ ರಾಜ್ಯಪಾಲ ರಾಮಕೃಷ್ಣ ಮಲ್ಲಾರ, ಪೂರ್ವಾಧ್ಯಕ್ಷ ಗೋಪಾಲ ಎಣ್ಣೆಮಜಲು, ಕಾರ್ಯದರ್ಶಿ ಭವಾನಿಶಂಕರ ಪೈಲಾಜೆ ಮೊದಲಾದವರು ಉಪಸ್ಥಿತರಿದ್ದರು.
ಒಟ್ಟು 100ಕ್ಕೂ ಹೆಚ್ಚು ಮಂದಿ ಶಿಬಿರದಲ್ಲಿ ನೇತ್ರ ತಪಾಸಣೆ ಮಾಡಿಸಿಕೊಂಡಿದ್ದು, ಅವರಲ್ಲಿ 46 ಜನರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಯಿತು. 7 ಮಂದಿಯನ್ನು ಕಣ್ಣಿನ ಪೊರೆ ಚಿಕಿತ್ಸೆಗೆ ನಿರ್ದೇಶಿಸಲಾಯಿತು.
إرسال تعليق