ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ.

ಸುಬ್ರಹ್ಮಣ್ಯ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀಯುತ ಮಂಜುನಾಥ್ ಭಂಡಾರಿ ಅವರ ಹುಟ್ಟುಹಬ್ಬದ ಅಂಗವಾಗಿ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ, ಪಂಚಾಮೃತ ಅಭಿಷೇಕ ಹಾಗೂ ಹೊಸಗಳಿಗಮ್ಮ ದೇವಿಗೆ ಕುಂಕುಮಾರ್ಚನೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ, ಸದಸ್ಯರಾದ ಅಶೋಕ್ ನೆಕ್ರಾಜಿ,ಶ್ರೀಮತಿ ಸೌಮ್ಯ ಭರತ್,
ಶ್ರೀಮತಿ ಪ್ರವೀಣಾ ರೈ ಮರ್ವಂಜ, ಶ್ರೀಮತಿ ಲೀಲಾ ಮನಮೋಹನ್,ಪ್ರಶಾಂತ್ ರೈ ಮರ್ವಂಜ ಅಧ್ಯಕ್ಷರು ತುಳುನಾಡು ರಕ್ಷಣಾ ವೇದಿಕೆಯ ,ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಸತೀಶ್ ಕೊಜುಗೂಡು,ಲೋಲಾಕ್ಷ ಕೈಕಂಬ, ಪವನ್, ಕಡಬ ತಾಲೂಕು ಪಂಚ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಹಾಗೂ ಸುಬ್ರಹ್ಮಣ್ಯ ಗ್ರಾಮಸಮಿತಿ ಅಧ್ಯಕ್ಷ ಮಾಧವ,ಸ್ಥಳೀಯ ಕಾಂಗ್ರೆಸ್ ಸಮಿತಿ ಸದಸ್ಯಯಶ್ವಥ್, ಮಂಜುನಾಥ ಭಂಡಾರಿ ಅವರ ಅಭಿಮಾನಿ ಬಳಗ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಮಂಜುನಾಥ ಭಂಡಾರಿ ಅವರು ರಾಜ್ಯದ ರಾಜಕೀಯ ಕ್ಷೇತ್ರದಲ್ಲಿ ಮಹತ್ವದ ಪಾತ್ರವಹಿಸಿ, ಕಾಂಗ್ರೆಸ್ ಪಕ್ಷದ ಶಕ್ತಿ ವೃದ್ಧಿಗೆ ಸದಾ ಶ್ರಮಿಸುತ್ತಿದ್ದಾರೆ. ಅವರ ರಾಜಕೀಯ ಜೀವನದಲ್ಲಿ ಇನ್ನಷ್ಟು ಉನ್ನತ ಹುದ್ದೆ ಗಳಿಸಲು ಹಾಗೂ ಅವರು ನಡೆಸಿಕೊಂಡು ಬರುತ್ತಿರುವ ಶಿಕ್ಷಣ ಮತ್ತು ವ್ಯಾಪಾರ ಕ್ಷೇತ್ರಗಳು ಅಭಿವೃದ್ಧಿಯ ಪಥದಲ್ಲಿ ಸಾಗಲಿ ಎಂಬ ಆಶಯದೊಂದಿಗೆ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಪ್ರಾರ್ಥನೆ ಸಲ್ಲಿಸಲಾಯಿತು.

ಭಕ್ತರ ಸಾನ್ನಿಧ್ಯದಲ್ಲಿ ನಡೆದ ಈ ಪೂಜೆ ವೇಳೆ,ಮಂಜುನಾಥ ಭಂಡಾರಿ ಅವರಿಗೆ ದೀರ್ಘಾಯುಷ್ಯ, ಆರೋಗ್ಯ ಹಾಗೂ ಭವಿಷ್ಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಮಂತ್ರಿಪದವಿವನ್ನು ಅಲಂಕರಿಸುವ ಯೋಗಭಾಗ್ಯ ದೊರೆಯಲಿ ಎಂದು ಶ್ರೀ ದೇವರರಲ್ಲಿ ಅನುಗ್ರಹ ಪ್ರಾರ್ಥನೆ ನಡೆಸಲಾಯಿತು.

📍 ಸ್ಥಳ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ
📅 ದಿನಾಂಕ: ಅಕ್ಟೋಬರ್ 14

Post a Comment

أحدث أقدم