ಸುರತ್ಕಲ್‌ನಲ್ಲಿ ಯುವಕರಿಗೆ ಚೂರಿ ಇರಿದು ಕೊಲೆಗೆ ಯತ್ನ – ಪೊಲೀಸರು ನಾಲ್ವರನ್ನು ಬಂಧಿಸಿ ಪ್ರಕರಣ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನಾದ ಬಳಿಯಲ್ಲಿ ಇಬ್ಬರು ಯುವಕರ ಮೇಲೆ ಚೂರಿ ಇರಿದು ಕೊಲೆಗೆ ಯತ್ನಿಸಿದ ಪ್ರಕರಣವನ್ನು ಪೊಲೀಸರು ಕೇವಲ ಕೆಲವೇ ದಿನಗಳಲ್ಲಿ ಬೇಧಿಸಿದ್ದಾರೆ. ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಪ್ರಮುಖ ಆರೋಪಿ ಗುರುರಾಜ್ ಆಚಾರಿ ಇನ್ನೂ ಪರಾರಿಯಾಗಿದ್ದಾನೆ.

ಪೊಲೀಸ್ ವರದಿ ಪ್ರಕಾರ, ಅಕ್ಟೋಬರ್ 23, 2025 ರಂದು ರಾತ್ರಿ ಸುಮಾರು 10.30ಕ್ಕೆ ಕಾನಾದ ದೀಪಕ್ ಭಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಹಾಗೂ ನಿಝಾಂ ಎಂಬ ಯುವಕರಿಬ್ಬರಿಗೆ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್, ನಿತಿನ್ ಹಾಗೂ ಸುಶಾಂತ್ ಸೇರಿಕೊಂಡು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ್ದರು.

ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಾದ
1️⃣ ಸುಶಾಂತ್ @ ಕಡವಿ (29), ವಾಸ: ಕಟ್ಲ ಮನೆ, ಕಾನಾ, ಸುರತ್ಕಲ್
2️⃣ ಕೆ.ವಿ. ಅಲೆಕ್ಸ್ (27), ವಾಸ: ಬೈಕಲ ಮನೆ, ಕಾನಾ ಕಟ್ಲ, ಇಡ್ಯಾ ಗ್ರಾಮ
3️⃣ ನಿತಿನ್ (26), ವಾಸ: ಇಂದಿರಾ ಕಟ್ಟೆ, ಸುರತ್ಕಲ್
ಮತ್ತು ಆರೋಪಿಗಳಿಗೆ ಆಶ್ರಯ ನೀಡಿದ
4️⃣ ಆರುಣ್ ಶೆಟ್ಟಿ (56), ವಾಸ: ಹೊನ್ನಕಟ್ಟೆ, ಸುರತ್ಕಲ್ — ಇವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಮುಖ ಆರೋಪಿ ಗುರುರಾಜ್ ಆಚಾರಿ ಹಾಗೂ ಆಶ್ರಯ ನೀಡಿದ ಅಶೋಕ್ ಎಂಬಾತರು ಪ್ರಸ್ತುತ ತಲೆಮರೆಸಿಕೊಂಡಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದ ಪತ್ತೆ ಹಾಗೂ ತನಿಖೆಯನ್ನು ಮಾನ್ಯ ಉಪ ಪೊಲೀಸ್ ಆಯುಕ್ತ (ಅಪರಾಧ ಮತ್ತು ಸಂಚಾರ) ಶ್ರೀ ರವಿಶಂಕರ್ ರವರ ನಿರ್ದೇಶನದಲ್ಲಿ, ಸಹಾಯಕ ಪೊಲೀಸ್ ಆಯುಕ್ತ (ಉತ್ತರ ಉಪ ವಿಭಾಗ) ಶ್ರೀ ಶ್ರೀಕಾಂತ್ ಕೆ ರವರ ಮಾರ್ಗದರ್ಶನದಲ್ಲಿ, ಸುರತ್ಕಲ್ ಪೊಲೀಸ್ ಠಾಣೆಯ ನಿರೀಕ್ಷಕ ಶ್ರೀ ಪ್ರಮೋದ್ ಕುಮಾರ್ ಪಿ ರವರ ನೇತೃತ್ವದಲ್ಲಿ ಪಿಎಸ್ಐ ರಾಘವೇಂದ್ರ ನಾಯ್ಕ್, ಜನಾರ್ಧನ ನಾಯ್ಕ್, ಶಶಿಧರ ಶೆಟ್ಟಿ, ಎಎಸ್‌ಐ ರಾಜೇಶ್ ಆಳ್ವ, ತಾರನಾಥ, ರಾಧಾಕೃಷ್ಣ ಹಾಗೂ ಸಿಬ್ಬಂದಿ ಅಣ್ಣಪ್ಪ, ಉಮೇಶ್ ಕುಮಾರ್, ತಿರುಪತಿ, ಅಜಿತ್ ಮ್ಯಾಥ್ಯೂ, ರಾಮು ಕೆ, ಕಾರ್ತೀಕ್, ವಿನೋದ್ ರವರು ಮತ್ತು ಸಿಸಿಬಿ ಘಟಕ, ಎಸ್‌ಎಎಫ್ ತಂಡ, ಶ್ವಾನ ದಳದವರು ಭಾಗವಹಿಸಿದ್ದರು.

Post a Comment

Previous Post Next Post