ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಳ ಬಳಿ ಇಂದು ಮುಂಜಾನೆ ನಡೆದ ಘಟನೆದಲ್ಲಿ, ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಗಾಡಿಯನ್ನು ತಡೆದ ಪೊಲೀಸರ ಮೇಲೆ ಕೊಲೆಯತ್ನ ನಡೆದಿದೆ.
ಮಾಹಿತಿ ಪ್ರಕಾರ, ಆರೋಪಿ ಅಬ್ದುಲ್ಲಾ (40), ಮೂಲತಃ ಕೇರಳದ ಕಾಸರಗೋಡು ಜಿಲ್ಲೆಯವನು, ಐಚರ್ ವಾಹನದಲ್ಲಿ 10 ಜಾನುವಾರುಗಳನ್ನು ಸಾಗಿಸುತ್ತಿದ್ದನು. ವಾಹನವನ್ನು ನಿಲ್ಲಿಸಲು ಪೊಲೀಸರ ಸೂಚನೆ ನೀಡಿದರೂ, ಆತನು ನಿಲ್ಲಿಸದೆ ವೇಗವಾಗಿ ಓಡಿಸಿಕೊಂಡು ಹೋದನು. ಸುಮಾರು 10 ಕಿಲೋಮೀಟರ್ ದೂರ ಪೊಲೀಸರು ಹಿಂಬಾಲಿಸಿದ ಬಳಿಕ, ಆರೋಪಿ ವಾಹನವನ್ನು ಹಿಂತಿರುಗಿ ಪೊಲೀಸರ ಜೀಪಿಗೆ ಡಿಕ್ಕಿ ಹೊಡೆದು ಪರಾರಿ ಯತ್ನ ನಡೆದಿದೆ.
ಈ ವೇಳೆ ಪರಿಸ್ಥಿತಿ ನಿಯಂತ್ರಣ ತಪ್ಪಿದ ಹಿನ್ನೆಲೆಯಲ್ಲಿ, ಪಿಎಸ್ಐ ರವರು ಎಚ್ಚರಿಕೆ ಗುಂಡು ಹಾರಿಸಿದ್ದು. ಒಂದು ಗುಂಡು ವಾಹನದ ಮೇಲೆ ತಾಗಿದ್ದು, ಮತ್ತೊಂದು ಗುಂಡು ಆರೋಪಿಯ ಕಾಲಿಗೆ ಬಿದ್ದಿದೆ. ಘಟನೆಯ ವೇಳೆಯಲ್ಲಿ ಇನ್ನೊಬ್ಬ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ.
ಗಾಯಗೊಂಡ ಆರೋಪಿಯನ್ನು ತಕ್ಷಣ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈತನ ವಿರುದ್ಧ ಈಗಾಗಲೇ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 33/2025 ರ ಗೋಹತ್ಯೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು ಎಂದು ತಿಳಿದುಬಂದಿದೆ.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹೊಸ ಪ್ರಕರಣ ದಾಖಲಾಗಿ ತನಿಖೆ ಪ್ರಗತಿಯಲ್ಲಿದೆ.
Post a Comment