ಸುಳ್ಯ: ತಾಲೂಕಿನ ಎರಡು ಪ್ರಮುಖ ಸ್ಥಳಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಸುಳ್ಯ ಕ್ಷೇತ್ರದ ಶಾಸಕಿ ಯಾದ ಭಾಗೀರಥಿ ಮುರುಳ್ಯ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಚಾರ್ವಾಕ ಗ್ರಾಮದ ಕಪಿಲೇಶ್ವರ ದೇವಾಲಯದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳ ಸಂಪರ್ಕ ಮಾರ್ಗ ಸುಧಾರಣೆ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ದೇವಾಲಯ ಪ್ರದೇಶದ ರಸ್ತೆ ಸುಧಾರಣೆಯಿಂದ ಭಕ್ತರಿಗೆ ಸುಗಮ ಸಂಚಾರ ಸೌಲಭ್ಯ ದೊರೆಯಲಿದೆ ಎಂದು ಹೇಳಿದರು.
ಅದೇ ರೀತಿ, ಕಾಣಿಯೂರು ಪದವಿಪೂರ್ವ ಕಾಲೇಜಿನ ರಸ್ತೆ ಅಭಿವೃದ್ಧಿ ಕಾಮಗಾರಿಗೂ ಶಾಸಕೆಯವರು ಗುದ್ದಲಿ ಪೂಜೆ ನೆರವೇರಿಸಿದರು. ಕಾಲೇಜು ವಿದ್ಯಾರ್ಥಿಗಳು ಮತ್ತು ಸ್ಥಳೀಯರ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಈ ವೇಳೆ ಪಂಚಾಯತ್ ಸದಸ್ಯರು, ಸ್ಥಳೀಯ ನಾಯಕರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
Post a Comment