ಅವರು ಮೊದಲು ಆದಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ನಂತರ ಮುಖ್ಯ ದೇವಸ್ಥಾನದಲ್ಲಿ ಮಹಾಪೂಜೆ ಸೇವೆ ಸಲ್ಲಿಸಿದರು. ವಿಜಯೇಂದ್ರ ಅವರೊಂದಿಗೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಶಾಸಕಿ ಭಾಗೀರಥಿ ಮುರುಳ್ಯ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಹಾಗೂ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಪ್ರಸನ್ನ ದರ್ಭೆ, ಗಿರೀಶ್ ಆಚಾರ್ಯ, ವನಜಾ ಭಟ್, ಶೋಭಾ ಗಿರಿಧರ್, ಭಾರತಿ ದಿನೇಶ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ವಿಜಯೇಂದ್ರ ಅವರು ದೇವಸ್ಥಾನದಲ್ಲಿ ದೇವರ ಆಶೀರ್ವಾದ ಪಡೆದ ಬಳಿಕ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಕುರಿತು ಸ್ಥಳೀಯ ನಾಯಕರೊಂದಿಗೆ ಚರ್ಚೆ ನಡೆಸಿದರು.
Post a Comment