ಡಾ. ಪುಷ್ಪ ಅಮರನಾಥ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ – ಜಾತ್ರಾ ಸಂಭ್ರಮದಲ್ಲಿ ಪಾಲ್ಗೊಂಡರು.

ಕುಕ್ಕೆ ಸುಬ್ರಹ್ಮಣ್ಯ, ನ. 22,ಕರ್ನಾಟಕ ರಾಜ್ಯ ಪಂಚ ಗ್ಯಾರಂಟಿ ಅನುಷ್ಠಾನ ಯೋಜನೆಯ ರಾಜ್ಯ ಉಪಾಧ್ಯಕ್ಷರು ಹಾಗೂ ಮೈಸೂರು ವಿಭಾಗ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಡಾ. ಪುಷ್ಪ ಅಮರನಾಥ್ ಅವರು ಇಂದು ಕುಕ್ಕೆ ಸುಬ್ರಹ್ಮಣ್ಯ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಜಾತ್ರಾ ಮಹೋತ್ಸವದಲ್ಲಿ ವಿಶೇಷವಾಗಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪಂಚಾಯತ್ ಗ್ಯಾರಂಟಿ ಅನುಷ್ಠಾನ ಯೋಜನೆಯ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಕಡಬ ತಾಲೂಕು ಪಂಚಾಯಿತಿ ಅನುಷ್ಠಾನ ಯೋಜನೆ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಸದಸ್ಯರು ಅಶೋಕ್ ನೆಕ್ರಾಜೆ, ಡಾ. ರಘು, ಮಾಸ್ಟರ್ ಪ್ಲಾನ್ ಸದಸ್ಯ ಸತೀಶ್ ಕುಜುಗೋಡು, ಲೋಕಕ್ಷ ಕೈಕಂಬ ಪವನ್ ಎಂ.ಡಿ, ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಕೃಷ್ಣಮೂರ್ತಿ ಸೇರಿದಂತೆ ಗಣ್ಯರು ಜೊತೆಯಿದ್ದರು.

ದೇವರ ದರ್ಶನ ಹಾಗೂ ಜಾತ್ರಾ ಕಾರ್ಯಕ್ರಮದ ವೇಳೆ ಗಣ್ಯರಿಗೆ ಅಗತ್ಯವಾದ ಎಲ್ಲಾ ಸೌಲಭ್ಯ ಮತ್ತು ವ್ಯವಸ್ಥೆಯನ್ನು ಸ್ಥಳೀಯ ಸಮಿತಿ ಸದಸ್ಯರು ಸಮರ್ಪಕವಾಗಿ ನಿರ್ವಹಿಸಿದರು.

ಡಾ. ಪುಷ್ಪ ಅಮರನಾಥ್ ಅವರು ದೇವರ ದರ್ಶನದ ನಂತರ ಮಾತನಾಡಿ, “ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕರ್ನಾಟಕದ ಧಾರ್ಮಿಕ ಪರಂಪರೆಯ ಪ್ರಮುಖ ಕೇಂದ್ರ. ಜಾತ್ರೆಯ ಶ್ರದ್ಧೆ ಹಾಗೂ ಭಕ್ತಿ ವಾತಾವರಣ ಮನಸೂರೆಗೊಂಡಿದೆ,” ಎಂದು ಹೇಳಿದರು.

ಜಾತ್ರಾ ಸಂಭ್ರಮದ ಹಿನ್ನೆಲೆಯಲ್ಲಿ ದೇವಳ ಪ್ರದೇಶದಲ್ಲಿ ಭಕ್ತರ ದಟ್ಟಣೆ ಹೆಚ್ಚಿದ್ದು, ಆಡಳಿತವು ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ.

Post a Comment

Previous Post Next Post