ಸುಬ್ರಹ್ಮಣ್ಯ: ರಬ್ಬರ್ ಬೆಳೆ ಬೆಲೆ ನಿರಂತರ ಕುಸಿತದಿಂದಾಗಿ ಸಂಕಷ್ಟದಲ್ಲಿರುವ ಬೆಳೆಗಾರರ ಸಮಸ್ಯೆ ನಿವಾರಣೆಗೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂಬ ಮನವಿಯೊಂದಿಗೆ, ರಬ್ಬರ್ ಬೆಳೆಗಾರರ ಹಿತರಕ್ಷಣಾ ವೇದಿಕೆಯ ವತಿಯಿಂದ ಪ್ರಸ್ತುತ ಪರಿಸ್ಥಿತಿಯ ಸಮಗ್ರ ಅಧ್ಯಯನ ವರದಿ ಗುರುವಾರ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಲ್ಲಿಸಲಾಯಿತು.
ಕೃಷಿ ಉತ್ಪನ್ನ ಮಾರುಕಟ್ಟೆ ತಜ್ಞ ಡಾ. ವಿಘ್ನೇಶ್ವರ ವರ್ಮುಡಿ ಅವರಿಂದ ಸಿದ್ಧಗೊಂಡ ಈ ಅಧ್ಯಯನ ವರದಿ ರಬ್ಬರ್ ಉತ್ಪಾದನಾ ವೆಚ್ಚ, ಮಾರುಕಟ್ಟೆ ಅಸ್ಥಿರತೆ, ಉತ್ಪಾದಕರ ಎದುರಿಸುತ್ತಿರುವ ಸವಾಲುಗಳು ಮತ್ತು ಪರಿಹಾರೋಪಾಯಗಳನ್ನು ಒಳಗೊಂಡಿದೆ.
ವೇದಿಕೆಯ ಮುಖಂಡರು, ರಬ್ಬರ್ ಕೃಷಿಯನ್ನು ರಾಜ್ಯ ಸರಕಾರದ ತೋಟಗಾರಿಕಾ ಇಲಾಖೆಯ ಅಧೀನಕ್ಕೆ ತರಲಾಗುತ್ತದೆಂದರೆ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಮತ್ತು ಕನಿಷ್ಠ ಬೆಂಬಲ ಬೆಲೆಯಂತಹ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗುತ್ತದೆ ಎಂದು ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಶಾಸಕಿ ಭಾಗೀರಥಿ ಮುರುಳ್ಯ, ಬೆಳೆಗಾರರ ನ್ಯಾಯೋಚಿತ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತರಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದವರು
ಕೇಂದ್ರ ರಬ್ಬರ್ ಮಂಡಳಿ ನಿರ್ದೇಶಕ ಮುಳಿಯ ಕೇಶವ ಭಟ್, ಪ್ರಮುಖರಾದ ಸಂತೋಷ್ ಕುತ್ತಮೊಟ್ಟೆ, ವೆಂಕಟ್ ದಂಬೆಕೋಡಿ, ವಿಜಯಕೃಷ್ಣ ಪೆರಾಜೆ, ವಿನಯ ಕುಮಾರ್ ಕಂದಡ್ಕ, ಪ್ರದೀಪ್ ರೈ, ಶಶಿಕಲಾ ಎನ್, ಸುಭಾಶ್ವಂದ್ರ ಬಂಗಾರಕೋಡಿ, ರಾಕೇಶ್ ಮೆಟ್ಟಿನಡ್ಕ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ರಬ್ಬರ್ ಬೆಳೆಗಾರರ ಹಿತರಕ್ಷಣಾ ವೇದಿಕೆಯ ಹಕ್ಕೊತ್ತಾಯ ಮನವಿಯನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ನೀಡುತ್ತಿರುವುದು. ಮುಳಿಯ ಕೇಶವ ಭಟ್, ಸಂತೋಷ್ ಕುತ್ತಮೊಟ್ಟೆ, ವೆಂಕಟ್ ದಂಬೆಕೋಡಿ, ವಿಜಯಕೃಷ್ಣ ಪೆರಾಜೆ, ವಿನಯ ಕುಮಾರ್ ಕಂದಡ್ಕ ಮತ್ತಿತರರು ಉಪಸ್ಥಿತಿ.
إرسال تعليق