ಸುಬ್ರಹ್ಮಣ್ಯ ಡಿಸೆಂಬರ್ 24 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಟಿ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾಜ್ಯ ಪರಿಶಿಷ್ಟ ಕಲ್ಯಾಣ ಇಲಾಖೆ ಮಂಗಳೂರು ಇದರ ವ್ಯಾಪ್ತಿಗೆ ಒಳಪಡುವ ಸುಬ್ರಹ್ಮಣ್ಯದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮವಾದ ಕಾರ್ಯಕ್ರಮಗಳನ್ನ ನೀಡುವುದರೊಂದಿಗೆ ಜನರ ಮೆಚ್ಚುಗೆ ಗಳಿಸಿರುವರು .
ಕುಕ್ಕೆ ಸುಬ್ರಹ್ಮಣ್ಯದ ರಥ ಬೀದಿ ಪಕ್ಕದ ಸಭಾಂಗಣದಲ್ಲಿ ಮಂಗಳವಾರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4:00 ವರೆಗೆ ನಿರಂತರವಾಗಿ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿರುವರು. ಈ ಸಂದರ್ಭದಲ್ಲಿ ಸುಳ್ಯ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಕೃಷ್ಣ ಬಿ, ನಿಲಯ ಮೇಲ್ವಿಚಾರಕ ಬಸವರಾಜ್, ವಸತಿ ಶಾಲೆಯ ಮುಖ್ಯ ಶಿಕ್ಷಕಿ ಮಲ್ಲಿಕಾ ಕೆ ,ಶಿಕ್ಷಕರುಗಳಾದ ಜೀವಿತ ಕೆ,ಕವಿತಾ ಎನ್ಎ, ಭವ್ಯ ಎಸ್, ಗೀತ ಸುಧಾ ಎಚ್, ಹರ್ಷಿತಾ ಬಿ ಮತ್ತು ವಸತಿ ನಿಲಯದ ಸಿಬ್ಬಂದಿ ವರ್ಗದವರಾದ ಯಶೋಧರ ಎಂ, ಕುಸುಮಾವತಿ,ರತ್ನಾವತಿ, ಲಲಿತ, ಮೋಹನಚಂದ್ರ,ಹರಿಣಾಕ್ಷಿ, ವಿದ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರು ಹಾಜರಿದ್ದರು.
Post a Comment